ಸಚಿವ ಸ್ಥಾನಕ್ಕಾಗಿ ಒತ್ತಡವೋ: ಶಕ್ತಿ ಪ್ರದರ್ಶನವೋ!

Satish Jarkiholi followers protest at freedom park

19-06-2018

ಬೆಂಗಳೂರು: ಮಾಜಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಇಂದು ಅವರ ಅಭಿಮಾನಿಗಳು, ಕಾರ್ಯಕರ್ತರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಯಮಕನಮರಡಿಯಿಂದ ಬಂದ ನೂರಾರು ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಂಡಿದ್ದರು.

ನಿನ್ನೆ ಬೆಳಗಾವಿಯಿಂದ ರೈಲಿನಲ್ಲಿ ಹೊರಟ ನೂರಾರು ಕಾರ್ಯಕರ್ತರು, ಅಭಿಮಾನಿಗಳು ಇಂದು ಬೆಳಿಗ್ಗೆ ಬೆಂಗಳೂರು ತಲುಪಿದ್ದರು. ಮಾನವ ಬಂಧುತ್ವ ವೇದಿಕೆ ಅಡಿ ಬೃಹತ್ ಪ್ರತಿಭಟನೆ ನಡೆದಿದ್ದು, ಖುದ್ದು ಸತೀಶ ಜಾರಕಿಹೊಳಿ ಅವರೇ ಈ ಅಭಿಮಾನಿಗಳನ್ನು ಕಳುಹಿಸಿಕೊಟ್ಟಿದ್ದಾರೆ ಎಂಬ ಮಾತುಗಳು ಸಹ ಕೇಳಿ ಬಂದಿವೆ. ಪಕ್ಷದಲ್ಲಿ ನೇರವಾಗಿ ಹೋರಾಟ ಮಾಡಲು ಸಾಧ್ಯವಿಲ್ಲ. ಇದರಿಂದ ಈ ಒತ್ತಡ ತಂತ್ರಕ್ಕೆ ಅವರು ಮುಂದಾಗಿದ್ದಾರೆ ಎನ್ನಲಾಗಿದೆ.

ಫಲ ಕೊಡದ ನಿರಂತರ ಸಭೆ: ಸಚಿವ ಸ್ಥಾನದ ತೀವ್ರ ಆಕಾಂಕ್ಷಿಯಾಗಿದ್ದ ಸತೀಶ್ ಜಾರಕಿಹೊಳಿ ಸತತ ಸಭೆಗಳನ್ನು ನಡೆಸಿದ್ದು, ಬಹಿರಂಗ ಅತೃಪ್ತಿ ವ್ಯಕ್ತಪಡಿಸಿದ್ದರು. ಆದರೆ ಇದು ಫಲ ಕೊಡದಿದ್ದಾಗ ನಾನು ಸಚಿವ ಸ್ಥಾನಕ್ಕೆ ಆಗ್ರಹಿಸುವುದಿಲ್ಲ ಎಂದು ಹೇಳಿದ್ದರು. ಆದರೆ ಪರೋಕ್ಷವಾಗಿ ಇದೀಗ ತಮ್ಮ ಅಭಿಮಾನಿಗಳ ಮೂಲಕ ಒತ್ತಡ ತಂತ್ರ ಹೇರುವ ಕಾರ್ಯಕ್ಕೆ ಮುಂದಾಗಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Satish Jarkiholi Freedom park ಹೋರಾಟ ಅತೃಪ್ತಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ