ಪೊಲೀಸ್ ಪೇದೆ ಶೇರ್ ಮಾಡಿದ ಪೋಸ್ಟ್ ನಲ್ಲಿ ಅಂಥದ್ದೇನಿತ್ತು?

A police constable shared facebook post against government: criticized by people

19-06-2018

ಹುಬ್ಬಳ್ಳಿ: ಪೊಲೀಸ್ ಪೇದೆಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿರುವ ಪೋಸ್ಟ್ ವಿರುದ್ಧ ತೀವ್ರ ಆಕ್ಷೇಪಣೆ ವ್ಯಕ್ತವಾಗುತ್ತಿದೆ. ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆಯ ಪೇದೆ ಅರುಣ್ ಡೊಳ್ಳಿನ್ ಎಂಬುವರು ‘ಕುಮಾರಸ್ವಾಮಿಯವರೇ ರಾಜೀನಾಮೆ‌ ಯಾವಾಗ.’ ‘18ದಿನ ಕಳೆದರೂ ಸಾಲಮನ್ನಾ ಮಾಡಿಲ್ಲ ರಾಜೀನಾಮೆ ಯಾವಾಗ’ ಎಂಬ ಪೋಸ್ಟ್  ಅನ್ನು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ. ಈ ಮುಖಾಂತರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಕಾಂಗ್ರೆಸ್-ಜೆಡಿಎಸ್ ಪಕ್ಷದ ವಿರುದ್ಧವೂ ಅಪಪ್ರಚಾರದ ಪೋಸ್ಟ್ ಶೇರ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಪೇದೆಯ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಣೆ ವ್ಯಕ್ತವಾಗುತ್ತಿದೆ. ‘ಬಿಜೆಪಿ ಕಾರ್ಯಕರ್ತರ ರೀತಿ ಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿ ಪರವಾಗಿ ಪ್ರಚಾರ ಮಾಡಿ ಜೆಡಿಎಸ್-ಕಾಂಗ್ರೆಸ್ ವಿರುದ್ಧ ಅಪಪ್ರಚಾರದ ಪೋಸ್ಟ್ಗಳನ್ನು ಶೇರ್ ಮಾಡುತ್ತಿದ್ದಾರೆ ಎಂಬ ದೂಗಳು ಕೇಳಿಬಂದಿವೆ. ಈ ಹಿಂದೆ ಕೂಡಾ ಇದೇ ರೀತಿಯ ಹಲವಾರು ವೀಡಿಯೋಗಳನ್ನು ಶೇರ್ ಮಾಡಿದ್ದಾರೆ ಎಂದೂ ಕೂಡ ತಿಳಿದು ಬಂದಿದೆ. ಪೇದೆಯ ಕೃತ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

 


ಸಂಬಂಧಿತ ಟ್ಯಾಗ್ಗಳು

police constable Facebook ಜಾಲತಾಣ ಆಕ್ಷೇಪ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ