ದೈಹಿಕ ಶಿಕ್ಷಣದ ಹೆಸರಲ್ಲಿ ವಿದ್ಯಾರ್ಥಿಗಳಿಂದ ಸ್ವಚ್ಚತಾ ಕಾರ್ಯ!

In the name of physical education Cleaning work in a school!

19-06-2018

ಮಂಡ್ಯ: ದೈಹಿಕ ಶಿಕ್ಷಣದ ಹೆಸರಲ್ಲಿ ಶಾಲಾ ಮಕ್ಕಳೊಂದಿಗೆ ಇತರೆ ಕೆಲಸಗಳನ್ನು ಮಾಡಿಸುತ್ತಿರುವುದು ಖಾಸಗಿ ಶಾಲೆಯೊಂದರಲ್ಲಿ ಬೆಳಕಿಗೆ ಬಂದಿದೆ. ಮಂಡ್ಯದ ಪ್ರತಿಷ್ಠಿತ ಡ್ಯಾಪೋಡಿಲ್ ಖಾಸಗಿ ಶಾಲೆಯಲ್ಲಿ ಈ ರೀತಿಯ ಘಟ‌ನೆ ನಡೆದಿದೆ. ವಿದ್ಯಾರ್ಥಿಗಳಿಂದ ಇತರೆ ಕೆಲಸ ಮಾಡಿಸಿರುವುದಕ್ಕೆ ಪೋಷಕರು ತೀವ್ರ ಅಸಮಧಾ‌ನ ವ್ಯಕ್ತಪಡಿಸಿದ್ದಾರೆ. ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಕೆಲಸ ಮಾಡಿಸುತ್ತಿದ್ದ ದೃಶ್ಯಗಳನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿದ ಸಾರ್ವಜನಿಕರು ಮಕ್ಕಳ ಪೋಷಕರಿಗೆ ಮಾಹಿತಿಯನ್ನು ಮುಟ್ಟಿಸಿದ್ದಾರೆ. ವಿದ್ಯಾರ್ಥಿಗಳ ಕೈಯಲ್ಲಿ ಹರಿತವಾದ ಆಯುಧಗಳನ್ನು ಕೊಟ್ಟು ಸ್ವಚ್ಚತಾ ಕಾರ್ಯಕ್ಕೆ ಶಾಲಾ ಆಡಳಿತ ಮಂಡಳಿ ಕಳುಹಿಸಿದೆ ಎಂಬ ಆರೋಪ ಕೇಳಿ ಬಂದಿದೆ. ವಿದ್ಯಾರ್ಥಿಗಳ ಕೈಲಿ ಕೆಲಸ ಮಾಡಿಸುತ್ತಿದ್ದರೂ ಶಿಕ್ಷಣ ಇಲಾಖೆ ಕಣ್ಮುಚ್ಚಿ ಕುಳಿತಿದೆ ಎಂದು ಪೋಷಕರು ದೂರಿದ್ದಾರೆ. ಒಟ್ಟಾರೆ ಸಾವಿರಾರು ರೂಪಾಯಿ ಶಾಲಾ ಶುಲ್ಕ ವಸೂಲಿ ಮಾಡುವ ಶಾಲೆಯಲ್ಲಿ ವಿದ್ಯಾರ್ಥಿಗಳು ಕೂಲಿಯಾಳುಗಳಾಗಿದ್ದಾರೆ ಎಂಬಂತಾಗಿದೆ ಈ ಘಟನೆ.

 


ಸಂಬಂಧಿತ ಟ್ಯಾಗ್ಗಳು

School students ಮೊಬೈಲ್ ಆಡಳಿತ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ