ಜಮ್ಮು-ಕಾಶ್ಮೀರ ಸರ್ಕಾರ ಪತನ!

BJP Ended Alliance With Mehbooba Mufti PDP In Jammu And Kashmir

19-06-2018

ನವದೆಹಲಿ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಮೂರು ವರ್ಷಗಳ ಹಿಂದೆ ರಚನೆಯಾಗಿದ್ದ ಪಿಡಿಪಿ-ಬಿಜೆಪಿ ನೇತೃತ್ವದ ಸರ್ಕಾರ ಮುರಿದು ಬಿದ್ದಿದೆ. ಮೆಹಬೂಬಾ ಮುಫ್ತಿ ಮುಖ್ಯ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಿಡಿಪಿಗೆ ನೀಡಿದ್ದ ಬೆಂಬಲವನ್ನು ಬಿಜೆಪಿ ಹಿಂಪಡೆದುಕೊಂಡಿದೆ. ಇದರೊಂದಿಗೆ ಪಿಡಿಪಿ-ಬಿಜೆಪಿ ಮೈತ್ರಿ ಮುರಿದು ಬಿದ್ದಿದೆ.

ಮೂರು ವರ್ಷಗಳಿಂದ ಅಧಿಕಾರದಲ್ಲಿದ್ದ ಮೆಹಬೂಬಾ ಮುಫ್ತಿ ನೇತೃತ್ವದ ಸಮ್ಮಿಶ್ರ ಸರ್ಕಾರ ಇದೀಗ ಪತನಗೊಂಡಂತಾಗಿದೆ. ಹೊಸದಿಲ್ಲಿಯ ಬಿಜೆಪಿ ಮುಖ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿಯ ರಾಮ್‌ ಮಾಧವ್‌ ಈ ವಿಷಯವನ್ನು ಪ್ರಕಟಿಸಿದರು. ವರಿಷ್ಠ ನಾಯಕರ ಜೊತೆ ಸಮಾಲೋಚನೆ ನಡೆಸಿದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ. ರಾಷ್ಟ್ರದ ಹಿತಾಸಕ್ತಿಯ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ರಾಮ್‌ ಮಾಧವ್‌ ತಿಳಿಸಿದರು.

ಮೈತ್ರಿಯನ್ನು ಮುಂದುವರಿಸಲಾಗದಷ್ಟು ಪರಿಸ್ಥಿತಿ ಕೈ ಮೀರಿದೆ. ಸರ್ಕಾರದಲ್ಲಿ ಭಾಗಿಯಾಗುವುದು ಸೂಕ್ತವಲ್ಲ ಎಂದು ನಿರ್ಧಾರ ಕೈಗೊಂಡ ನಂತರ ಪಿಡಿಪಿಗೆ ನೀಡಿರುವ ಬೆಂಬಲವನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಮೂಲ ತತ್ವಗಳಿಗೆ ಧಕ್ಕೆ ಆಗಬಾರದು ಎಂಬುದು ನಮ್ಮ ಬೇಡಿಕೆಯಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ನಡೆದ ಬೆಳವಣಿಗೆಗಳು ಸಮರ್ಥನೀಯವಾಗಿಲ್ಲ ಎಂಬುದು ಸ್ಪಷ್ಟವಾದ ನಂತರ ಮೈತ್ರಿಯಿಂದ ಹೊರಬರಲು ನಿರ್ಧರಿಸಲಾಗಿದೆ ಎಂದು ರಾಮ್‌ ಮಾಧವ್ ತಿಳಿಸಿದ್ದಾರೆ. ಸರಕಾರದಲ್ಲಿ ಭಾಗಿಯಾಗಿದ್ದ ಬಿಜೆಪಿಯ ಎಲ್ಲ ಸಚಿವರು ರಾಜೀನಾಮೆ ಸಲ್ಲಿಸಲಿದ್ದಾರೆ. ನಂತರ ರಾಜ್ಯಪಾಲರ ಆಡಳಿತ ಜಾರಿಗೆ ತರುವುದು ಸೂಕ್ತ ಎಂದು ಅವರು ಸ್ಪಷ್ಟಪಡಿಸಿದ್ದಾರೆ.



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ