ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಣೆ

 illegal livestock: Police Protected and arrested 2

19-06-2018

ಬೆಂಗಳೂರು: ಬಾಗೇಪಲ್ಲಿ ಹಾಗೂ ಹೊಸಕೋಟೆ ತಾಲ್ಲೂಕಿನ ಜಡಿಗೇನಹಳ್ಳಿ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 62 ಜಾನುವಾರುಗಳನ್ನು ಬೆಂಗಳೂರು ಗ್ರಾಮಾಂತರ ಪೊಲೀಸರು ವಶಪಡಿಸಿಕೊಂಡು ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಾರ್ಮೊನಿ ಅನಿಮಲ್ ವೆಲ್‍ ಫೇರ್ ಸಂಸ್ಥೆಯ ಮಾಹಿತಿ ಮೇರೆಗೆ ಬಾಗೇಪಲ್ಲಿ ತಾಲ್ಲೂಕಿನ ಟೋಲ್ ಪ್ಲಾಜಾ ಬಳಿ ಲಾರಿಯಲ್ಲಿ ಸಾಗಿಸುತ್ತಿದ್ದ ಜಾನುವಾರುಗಳನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.

ಕಂಟೈನರ್ ನಲ್ಲಿ ಆಂಧ್ರ ಪ್ರದೇಶದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಜಾನುವಾರುಗಳನ್ನು ರಕ್ಷಿಸಲಾಗಿದೆ. ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನೊಂದೆಡೆ ಹೊಸಕೋಟೆ ತಾಲ್ಲೂಕಿನ ಜಡಿಗೇನಹಳ್ಳಿ ಬಳಿ ಅಕ್ರಮವಾಗಿ ಹಸು ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಲಾಗಿದ್ದು, 40 ಹಸುಗಳನ್ನು ವಶಕ್ಕೆ ಪಡೆಯಲಾಗಿದೆ. ಸಮ್ನಾತ (27), ಜಿಜೋ(27) ಬಂಧಿತರು. ಬಳ್ಳಾರಿಯಿಂದ ಸೇಲಂಗೆ ಹಸುಗಳನ್ನು ಸಾಗಣೆ ಮಾಡಲಾಗುತ್ತಿತ್ತು. ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 


ಸಂಬಂಧಿತ ಟ್ಯಾಗ್ಗಳು

Toll Animal welfare ಕಂಟೈನರ್ ಜಾನುವಾರು


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ