ಪತ್ನಿಯನ್ನು ಕೊಲೆಗೈದು ಪತಿ ಪರಾರಿ!

A Man killed his own wife

20-06-2018

ಬೆಂಗಳೂರು: ಆಗಾಗ ಮಾಡಿಕೊಳ್ಳುತ್ತಿದ್ದ ಜಗಳಕ್ಕೆ ಬಾಡಿಗೆಗಿದ್ದ ಮನೆ ಖಾಲಿ ಮಾಡಲು ಮಾಲೀಕರು ಹೇಳಿದ್ದರಿಂದ ದಂಪತಿ ನಡುವೆ ಉಂಟಾದ ಜಗಳ ವಿಕೋಪಕ್ಕೆ ತಿರುಗಿ ಪತ್ನಿಯನ್ನು ಪತಿಯೇ ಉಸಿರುಗಟ್ಟಿಸಿ ಕೊಲೆಗೈದು ಪರಾರಿಯಾಗಿರುವ ಘಟನೆ ಕಾಮಾಕ್ಷಿಪಾಳ್ಯದಲ್ಲಿ ನಡೆದಿದೆ.

ಕಾಮಾಕ್ಷಿಪಾಳ್ಯದ ಕಾವೇರಿಪುರದಲ್ಲಿ ಪತ್ನಿ ಮಾಲತಿ (38) ಉಸಿರುಗಟ್ಟಿಸಿ ಕೊಲೆ ಮಾಡಿ ಪರಾರಿಯಾಗಿರುವ ಪತಿ ಬಾಪಿಗಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ.

ಓರಿಸ್ಸಾ ಮೂಲದ ಬಾಪಿ ಮತ್ತು ಮಾಲತಿ ದಂಪತಿ ಕಳೆದ ಕೆಲ ವರ್ಷಗಳಿಂದ ನಗರದಲ್ಲಿ ನೆಲೆಸಿದ್ದರು. ಆರೋಪಿ ಪತಿ ಬಾಪಿ ಕೈ ಮಗ್ಗದಲ್ಲಿ ಕೆಲಸ ಮಾಡುತ್ತಿದ್ದರೆ, ಪತ್ನಿ ಮಾಲತಿ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದು, ಕಳೆದ 9 ತಿಂಗಳ ಹಿಂದೆ ಕಾವೇರಿಪುರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು.

ದಂಪತಿ ನಡುವೆ ಕ್ಷುಲ್ಲಕ ಕಾರಣಕ್ಕೆ ಆಗಾಗ ಜಗಳ ನಡೆಯುತ್ತಿತ್ತು ಇದನ್ನು ನೋಡಿದ ಮನೆ ಮಾಲೀಕರು ಮನೆ ಖಾಲಿ ಮಾಡಲು ಸೂಚಿಸಿದ್ದರು. ಈ ವಿಚಾರಕ್ಕೆ ಉಂಟಾದ ಇಬ್ಬರ ನಡುವಿನ ಜಗಳ ತಾರಕಕ್ಕೇರಿದ ಹಿನ್ನೆಲೆಯಲ್ಲಿ ಪತ್ನಿ ಮಾಲತಿಯನ್ನು ಬಾಪಿ ಉಸಿರುಗಟ್ಟಿಸಿ ಹತ್ಯೆಗೈದಿದ್ದಾನೆ.

ಬಳಿಕ ಆಕೆ ಮಲಗಿದ್ದಾರೆ ಎನ್ನುವಂತೆ ಆಕೆಯ ಮೇಲೆ ಬೆಡ್ ಶೀಟ್ ಹೊದಿಸಿ, ಮನೆಗೆ ಬೀಗ ಹಾಕಿಕೊಂಡು ಪರಾರಿಯಾಗಿದ್ದಾನೆ ಸ್ಥಳೀಯ ವ್ಯಕ್ತಿಯೊಬ್ಬರು ಆರೋಪಿ ಬಾಪಿ ಮನೆ ಬಳಿ ಹೋದಾಗ ಈ ವಿಚಾರ ಬೆಳಕಿಗೆ ಬಂದಿದೆ.

ಘಟನೆ ಬಳಿಕ ಕಾಮಾಕ್ಷಿಪಾಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿ ಪತ್ತೆಗೆ ವಿಶೇಷ ತಂಡ ರಚನೆ ಮಾಡಲಾಗಿದ್ದು, ಶೋಧಕಾರ್ಯ ಮುಂದುವರೆದಿದೆ ಎಂದು ಡಿಸಿಪಿ ರವಿ ಚೆನ್ನಣ್ಣವರ್ ತಿಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

wife Murder ವಿಶೇಷ ತಂಡ ರವಿ ಚೆನ್ನಣ್ಣವರ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ