ಕಾರಿನ ಮೇಲೆ ಬಿದ್ದ ಲಾರಿ: ಕಾರು ಚಾಲಕ ಸಾವು

An lorry fell on a car: car driver died

20-06-2018

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರಿನ ಮೇಲೆ ಲಾರಿ ಬಿದ್ದ ಪರಿಣಾಮ, ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಾಗವಾರ ಫ್ಲೈ ಓವರ್ ಬಳಿ ನಿನ್ನೆ ತಡರಾತ್ರಿ ನಡೆದಿದೆ. ಕಾರು ಚಾಲಕ ಪ್ರತಾಪ್ (26) ಮೃತ ವ್ಯಕ್ತಿ. ಖಾಸಗಿ ಕಂಪನಿಯ ಉದ್ಯೋಗಿಗಳನ್ನು ಕಂಪನಿಯಿಂದ ಮನೆಗೆ ಡ್ರಾಪ್ ಮಾಡಿ ವಾಪಸ್ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.

ವೇಗವಾಗಿ ಬಂದ ಲಾರಿ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಅಲ್ಲೇ ಕಾರು ನಿಲ್ಲಿಸಿಕೊಂಡಿದ್ದ ಪ್ರತಾಪ್ ಕಾರಿನ ಮೇಲೆ ಲಾರಿ ಬಿದ್ದಿದೆ. ಕಾರಿನ ಒಳಗಿದ್ದ ಪ್ರತಾಪ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆ ನಡೆಯುತ್ತಿದ್ದಂತೆ ಲಾರಿ ಚಾಲಕ ಲಾರಿಯನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿರುವ ಬಾಣಸವಾಡಿ ಸಂಚಾರಿ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದು ಚಾಲಕನ ವಿರುದ್ಧ ಅತಿ ವೇಗದ ಚಾಲನೆಯಿಂದ ವ್ಯಕ್ತಿಯ ಸಾವಿಗೆ ಕಾರಣ ಎಂಬ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಲಾರಿಯ ನೋಂದಣಿ ಸಂಖ್ಯೆ ಆಧಾರದ ಮೇಲೆ ಚಾಲಕನನ್ನು ಪತ್ತೆ ಮಾಡುವ ಕೆಲಸ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಬಾಣಸವಾಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

flyover Accident ಪರಿಣಾಮ ನಿಯಂತ್ರಣ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ