‘2022ರ ವೇಳೆಗೆ ರೈತರ ಆದಾಯ ದುಪ್ಪಟ್ಟು ಮಾಡುವ ಗುರಿ’

Narendra modi conversation with farmers through namo app

20-06-2018

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ನಮೋ ಆ್ಯಪ್ ಮೂಲಕ ಇಂದು ರೈತರೊಂದಿಗೆ ಸಂವಾದ ನಡೆಸಿದರು. ದೇಶದ 600 ಜಿಲ್ಲೆಗಳಲ್ಲಿ ರೈತರು ಈ ಸಂವಾದದಲ್ಲಿ ಪಾಲ್ಗೊಂಡಿದ್ದರು. 2022ರ ವೇಳೆಗೆ ರೈತರ ಆದಾಯ ದ್ವಿಗುಣ ಗೊಳಿಸಲು ಸರ್ಕಾರ ಕಾರ್ಯಯೋಜನೆ ರೂಪಿಸಿದೆ. ಕೃಷಿ ವಲಯಕ್ಕೆ ನೀಡುತ್ತಿರುವ ಬಜೆಟ್ ಅನ್ನು ದ್ವಿಗುಣಗೊಳಿಸಿ 2.12 ಲಕ್ಷ ಕೋಟಿ ರೂಪಾಯಿಗೆ ಹೆಚ್ಚಿಸಲಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.

ರೈತರ ಆದಾಯ ದ್ವಿಗುಣಗೊಳಿಸಲು ಮತ್ತು ಉತ್ಪಾದನಾ ವೆಚ್ಚ ಕಡಿಮೆ ಮಾಡಲು ಸರ್ಕಾರ ಕೆಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ರೈತರ ಬೆಳೆಗೆ ನ್ಯಾಯೋಚಿತ ಬೆಲೆ, ಬೆಳೆ ಹಾಳಾಗದಂತೆ ನೋಡಿಕೊಳ್ಳುವುದು ಮತ್ತು ಪರ್ಯಾಯ ಆದಾಯ ಮೂಲ ಸೃಷ್ಟಿಸಲು ನಮ್ಮ ಸರ್ಕಾರ ಆದ್ಯತೆ ನೀಡಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು. ರೈತರ ಕಠಿಣ ಪರಿಶ್ರಮದಿಂದ ದೇಶದಲ್ಲಿ ಆಹಾರ ಉತ್ಪಾದನೆ ಹೆಚ್ಚಳವಾಗಿದೆ. ಇದರೊಂದಿಗೆ ಹಾಲು, ಹಣ್ಣು ಹಂಪಲು ಮತ್ತು ತರಕಾರಿ ಉತ್ಪಾದನೆಯೂ ಹಿಂದೆಂದಿಗಿಂತಲೂ ಹೆಚ್ಚಾಗಿದೆ. 2017-18ರಲ್ಲಿ 280 ದಶಲಕ್ಷ ಟನ್‍ ಗಳಷ್ಟು ಆಹಾರ ಉತ್ಪಾದನೆಯಾಗಿದೆ. ಇದು 2010-14ರಲ್ಲಿ 250 ದಶಲಕ್ಷ ಟನ್‍ ಗಳಷ್ಟು ಇತ್ತು. ದ್ವಿದಳ ಧಾನ್ಯಗಳ ಉತ್ಪಾದನೆಯಲ್ಲಿ 10.5ರಷ್ಟು ಹೆಚ್ಚಳವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ರೈತರು ಬೆಳೆದ ಬೆಳೆಗಳಿಗೆ ಉತ್ತಮ ದರ ದೊರೆಕುವಂತೆ ಮಾಡಲು ಕ್ರಮಕೈಗೊಳ್ಳಲಾಗಿದೆ. ಮಧ್ಯವರ್ತಿಗಳ ಹಾವಳಿ ತಡೆಗಟ್ಟಲು ಇ-ನಾಮ್ ಹೆಸರಿನ ಆನ್‍ ಲೈನ್ ವೇದಿಕೆಯನ್ನು ಸ್ಥಾಪಿಸಲಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.


ಸಂಬಂಧಿತ ಟ್ಯಾಗ್ಗಳು

Narendra Modi Modi App ಆನ್‍ ಲೈನ್ ಮಧ್ಯವರ್ತಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ