ಇಂದಿನಿಂದ ಬಜೆಟ್ ಪೂರ್ವಭಾವಿ ಸಭೆಗಳು

Budget preparation meetings from today

21-06-2018

ಬೆಂಗಳೂರು: ಇಂದಿನಿಂದ ಬಜೆಟ್ ಪೂರ್ವಭಾವಿ ಸಭೆಗಳು ವಿಧಾನಸೌಧದಲ್ಲಿ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಆರಂಭವಾಗಲಿವೆ. ವಿವಿಧ ಇಲಾಖೆಗಳೊಂದಿಗೆ ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ ಸಿಎಂ. ಕಾರ್ಮಿಕ ಇಲಾಖೆ, ಕಂದಾಯ ಇಲಾಖೆ, ಜಲಸಂಪನ್ಮೂಲ ಇಲಾಖೆ, ಸಣ್ಣ ನೀರಾವರಿ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಸೇರಿ ಹಲವು ಇಲಾಖೆಗಳ ಸಭೆ ನಡೆಸಲಿದ್ದು, ಇಲಾಖಾವಾರು ಮಾಹಿತಿ ಪಡೆಯಲಿದ್ದಾರೆ. ಬಜೆಟ್ ಕುರಿತು ಸಮ್ಮಿಶ್ರ ಸರ್ಕಾರದಲ್ಲಿ ಗೊಂದಲ ಮೂಡಿಸಿತ್ತು, ನೂತನ ಬಜೆಟ್ ಮಂಡಿಸಬೇಕೇ ಅಥವ ಮಂಡಿಸಿರುವ ಬಜೆಟ್ ಗೆ ಇತರೆ ಕಾರ್ಯಕ್ರಮಗಳನ್ನು ಸೇರಿಸಬೇಕಾ ಎಂಬುದರ ಕುರಿತು ಚರ್ಚೆಗಳು ನಡೆದಿದ್ದವು. ಇದರ ಬೆನ್ನಲ್ಲೇ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಸಿಎಂ ಕುಮಾರಸ್ವಾಮಿ ಬಜೆಟ್ ಮಂಡಿಸಲಿದ್ದಾರೆ ಎಂಬ ಹೇಳಿಕೆ ನೀಡಿದ್ದರು. ಇನ್ನು ಬಜೆಟ್ ಕುರಿತು ಸಿಎಂ ಕುಮಾರಸ್ವಾಮಿ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದ್ದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ