ಕರಾವಳಿ ವಿವಿಧೆಡೆ ಸಾಮೂಹಿಕ ಯೋಗ ಪ್ರದರ್ಶನ

Collective yoga performances across the coastal areas of karnataka

21-06-2018

ಮಂಗಳೂರು: ವಿಶ್ವ ಯೋಗ ದಿನಾಚರಣೆ ಹಿನ್ನೆಲೆ, ಕರಾವಳಿ ಭಾಗದ ವಿವಿಧೆಡೆ ಸಾಮೂಹಿಕ ಯೋಗ ಪ್ರದರ್ಶನ ನಡೆಸಲಾಯಿತು. ಧರ್ಮಸ್ಥಳದ ಅಮೃತವರ್ಷಿಣಿ ಸಭಾ ಭವನದಲ್ಲಿ ಬೃಹತ್ ಮಟ್ಟದಲ್ಲಿ ವಿಶ್ವ ಯೋಗ ದಿನಾಚರಣೆಯಲ್ಲಿ ಎರಡು ಸಾವಿರಕ್ಕೂ ಅಧಿಕ ಜನರು ಪಾಲ್ಗೊಂಡಿದ್ದರು. ಇನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು. ಬೆಳಿಗ್ಗೆ 8 ಗಂಟೆಗೆ ಮಂಗಳಾ ಸ್ಟೇಡಿಯಂ ನೂರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿ ಸಾಮೂಹಿಕ ಯೋಗ ಪ್ರದರ್ಶನ ಮಾಡಿದರು.


ಸಂಬಂಧಿತ ಟ್ಯಾಗ್ಗಳು

Yoga Day Stadium ಧರ್ಮಸ್ಥಳ ಜಿಲ್ಲಾಡಳಿತ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ