ಬಹುಮಹಡಿ ವಾಹನ ನಿಲ್ದಾಣ ಕಾಮಗಾರಿ ಪರಿಶೀಲನೆ

Deputy Chief Minister has reviewed the multi-level vehicle parking construction

21-06-2018

ಬೆಂಗಳೂರು: ಸ್ವಾತಂತ್ರ್ಯ ಉದ್ಯಾನವನ ಬಹುಮಹಡಿ ವಾಹನ ನಿಲ್ದಾಣ ಕಾಮಗಾರಿ ಹಾಗೂ ಮಹಾರಾಜ ಕಾರು ನಿಲ್ದಾಣ ಕಾಮಗಾರಿ ಪ್ರಗತಿಯನ್ನು ಉಪಮುಖ್ಯಮಂತ್ರಿ ಹಾಗೂ‌ ಬೆಂಗಳೂರು ಅಭಿವೃದ್ಧಿ ಸಚಿವ ಡಾ.ಜಿ.ಪರಮೇಶ್ವರ ಅವರು ಪರಿಶೀಲನೆ ನಡೆಸಿದರು.

ಬೆಂಗಳೂರಿನಲ್ಲಿ ಪಾರ್ಕಿಂಗ್ ಸಮಸ್ಯೆ ನಿವಾರಣೆಗೆ ಫ್ರೀಡಂ ಪಾರ್ಕ್‌ನಲ್ಲಿ ಬಹುಮಹಡಿ ವಾಹನ ನಿಲ್ದಾಣ ನಿರ್ಮಿಸಲಾಗುತ್ತಿದ್ದು,  ಮುಂದಿನ ಮಾರ್ಚ್ ಅಂತ್ಯದ ವೇಳೆಗೆ ಪೂರ್ಣಗೊಳ್ಳಲಿದೆ. 80ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ ಈ ನಿಲ್ದಾಣದಲ್ಲಿ 500 ಕಾರು ಹಾಗೂ 500 ಬೈಕ್ ನಿಲುಗಡೆಗೆ ಸಾಧ್ಯವಾಗುವ ರೀತಿ‌ ನಿರ್ಮಿಸಲಾಗುತ್ತಿದೆ.

ಕಾಮಗಾರಿ ಪ್ರಾರಂಭಗೊಂಡ 24 ತಿಂಗಳಲ್ಲಿ ಮುಗಿಯಬೇಕಿತ್ತು. ಕಾಮಗಾರಿ ವೇಳೆ ಕಲ್ಲು ಸಿಕ್ಕಿರುವ ಕಾರಣ ನಿಧಾನವಾಗಿದೆ. ಮಾರ್ಚ್ ಕೊನೆಯ ವಾರದೊಳಗೆ ಕೆಲಸ ಮುಗಿಸುವಂತೆ ಅಧಿಕಾರಿಗಳು ಬರವಣಿಗೆ ಮೂಲಕ ಭರವಸೆ ನೀಡಿರುವುದರಿಂದ ತಡವಾಗುವ ಪ್ರಶ್ನೆ ಇಲ್ಲ ಎಂದಿದ್ದಾರೆ. ಜೆಸಿ ರಸ್ತೆಯಲ್ಲೂ ಬಹುಮಹಡಿ ಪಾರ್ಕಿಂಗ್ ಕಾಮಗಾರಿ ನಡೆಯುತ್ತಿದ್ದು, ಅಲ್ಲಿಗೂ ಭೇಟಿ ನೀಡಲಿದ್ದೇನೆ. ತ್ವರಿತವಾಗಿ ಎಲ್ಲ ಪಾರ್ಕಿಂಗ್ ನಿಲ್ದಾಣಗಳ ಕಾಮಗಾರಿಗಳೂ ಶೀಘ್ರವೇ ಮುಗಿಯಲಿದೆ ಎಂದು ಭರವಸೆ ನೀಡಿದರು.

.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ