ಡಿಕೆಶಿ ವಿರುದ್ಧ ರಾಜಕೀಯ ದ್ವೇಷ: ಹೆಚ್ಡಿಕೆ

21-06-2018
ಬೆಂಗಳೂರು: ಕಾವೇರಿ ನದಿ ಪಾತ್ರದಲ್ಲಿ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಕೆರೆ ಹಾಗೂ ನಾಲೆಗಳಿಗೆ ನೀರು ಬಿಡುವಂತೆ ಅಧಿಕಾರಿಗಳಿಗೆ ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಬರುವವರೆಗೂ ಕಾಯಲು ಸಾಧ್ಯವಿಲ್ಲ, ತಾಂತ್ರಿಕ ಮತ್ತು ಕಾನೂನು ತೊಡಕುಗಳು ಎದುರಾದರೆ ಅವುಗಳನ್ನು ನಿಭಾಯಿಸಲು ಸಿದ್ಧವಿರುವುದಾಗಿ ಹೇಳಿದರು.
ಆರ್ಥಿಕ ಅಪರಾಧಗಳ ನ್ಯಾಯಾಲಯದಿಂದ ನೋಟಿಸ್ ಪಡೆದಿರುವ ಸಚಿವ ಡಿ.ಕೆ.ಶಿವಕುಮಾರ್ ಅವರಿಂದ ರಾಜೀನಾಮೆ ಪಡೆಯಬೇಕೆಂದು ಬಿಜೆಪಿ ನಾಯಕರು ಒತ್ತಾಯ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಶಿವಕುಮಾರ್ ವಿರುದ್ಧ ರಾಜಕೀಯ ದ್ವೇಷದಿಂದ ಇಂತಹ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಹೇಳಿದರು.
ಒಂದು ಕಮೆಂಟನ್ನು ಹಾಕಿ