ಬೇಡಿಕೆಗಳು ಈಡೇರುವವರೆಗೂ ಮುಷ್ಕರ ವಾಪಸ್ ಇಲ್ಲ: ಬಿ.ಚನ್ನಾರೆಡ್ಡಿ

no question of withdrawal strike until demands are met said

21-06-2018

ಬೆಂಗಳೂರು: ಕಳೆದ ನಾಲ್ಕು ದಿನಗಳಿಂದ ದೇಶಾದ್ಯಂತ ನಡೆಯುತ್ತಿರುವ ಟ್ರಕ್ ಮಾಲೀಕರ ಅನಿರ್ದಿಷ್ಟಾವಧಿ ಮುಷ್ಕರ ಬೇಡಿಕೆಗಳು ಈಡೇರುವವರೆಗೂ ಮುಂದುವರೆಯಲಿದೆ ಎಂದು ಅಖಿಲ ಭಾರತ ಸರಕು ಸಾಗಣೆ ವಾಹನಗಳ ಮಾಲೀಕರ ಸಂಘಗಳ ಮಹಾ ಒಕ್ಕೂಟದ ಅಧ್ಯಕ್ಷ ಬಿ.ಚನ್ನಾರೆಡ್ಡಿ ಹೇಳಿದ್ದಾರೆ.

ನಗರದ ಯಶವಂತಪುರದಲ್ಲಿರುವ ಟ್ರಕ್ ಟರ್ಮಿನಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವೈಜ್ಞಾನಿಕವಾಗಿ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಮಾಡಿರುವುದು ಮತ್ತು ಮೂರನೇ ಪಾರ್ಟಿ ಪ್ರೀಮಿಯಂ ದರವನ್ನು ಹೆಚ್ಚಳ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಅಖಿಲ ಭಾರತ ಟ್ರಕ್ ಮಾಲೀಕರ ಮಹಾ ಒಕ್ಕೂ ಜೂನ್ 18ರಿಂದ ದೇಶಾದ್ಯಂತ ಅನಿರ್ದಿಷ್ಠಾವಧಿ ಮುಷ್ಕರ ಪ್ರಾರಂಭಿಸಿದ್ದೇವೆ. ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದರೂ ಕೂಡಾ ಇದುವರೆಗೂ ಕೇಂದ್ರ ಸರಕಾರದಿಂದ ನಮ್ಮ ಬೇಡಿಕೆಗಳನ್ನು ಈಡೇರಿಸುವ ಭರವಸೆ ಸಿಕ್ಕಿಲ್ಲ. ಈ ಮುಷ್ಕರ ಮಾರ್ಚ್ ತಿಂಗಳಿನಲ್ಲೇ ನಡೆಯಬೇಕಾಗಿತ್ತು. ಆದರೆ ಬೇರೆ ಬೇರೆ ಕಾರಣಗಳಿಂದ ಮುಂದೂಡಿದ್ದೆವು ಎಂದರು.

ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗೋಪಾಲ ಸ್ವಾಮಿ ಮಾತನಾಡಿ, ದೊಡ್ಡ ದೊಡ್ಡ ಲಾರಿ ಮಾಲೀಕರಿಗೆ ಕೆಲವು ಜವಾಬ್ದಾರಿ ಇರುತ್ತವೆ. ನಮಗೆ ಮುಖ್ಯವಾಗಿ ಡಿಸೇಲ್ ಹಾಗೂ ಪೆಟ್ರೋಲ್ ವಿಷಯ ಮುಖ್ಯ. ನಾವು ಯಾರಿಗೂ ಅನ್ಯಾಯ ಮಾಡುತ್ತಿಲ್ಲ. ಸರಕಾರ ಕರೆದು ಮತುಕತೆ ನಡೆಸುವವರೆಗೂ ಪರಿಸ್ಥಿತಿ ಇದೇ ರೀತಿ ಮುಂದುವರೆಯಲಿದೆ. ನಾವು ಸಮಾಧಾನದಿಂದ ಮುಷ್ಕರ ಮಾಡುತ್ತಿದ್ದು, ಯಾವುದೇ ರೀತಿಯಲ್ಲಿ ಕಲ್ಲು ಹೋಡೆಯುವುದಕ್ಕೆ ಮುಂದಾಗುವವರಲ್ಲ ಎಂದರು.

ಇಂದು ಸಂಜೆ ಎಲ್ಲಾ ರಾಜ್ಯಗಳ ಲಾರಿ ಒಕ್ಕೂಟದ ಅಧ್ಯಕ್ಷರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಅವರೊಂದಿಗೆ ಮಾತುಕತೆ ನಡೆಸಿ ಮುಂದಿನ ನಮ್ಮ ನಿರ್ಣಯವನ್ನು ಕೈಗೊಳ್ಳುವುದಾಗಿ ತಿಳಿಸಿದರು.


ಸಂಬಂಧಿತ ಟ್ಯಾಗ್ಗಳು

strike lorry ಸಮಾಧಾನ ಲಾರಿ ಒಕ್ಕೂಟ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ