ಉನ್ನತ ಶಿಕ್ಷಣ ಸಚಿವರಾಗಿ ಜಿಟಿಡಿ ಅಧಿಕಾರ ಸ್ವೀಕಾರ

finally G.T.Devegowda agreed to the higher education minister!

22-06-2018

ಬೆಂಗಳೂರು: ತನಗೆ ಉನ್ನತ ಶಿಕ್ಷಣ ಇಲಾಖೆ ಬೇಡ ಎಂದು ಖಾತೆ ಬದಲಾವಣೆಗೆ ಪಟ್ಟು ಹಿಡಿದಿದ್ದ ಉನ್ನತ ಶಿಕ್ಷಣ ಖಾತೆ ಸಚಿವ ಜಿ.ಟಿ.ದೇವೇಗೌಡರು ಇಂದು ಕೊನೆಗೂ ಖಾತೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 344ರಲ್ಲಿ ಕುಟುಂಬ ಸಮೇತ ಬಂದು ಪೂಜೆ ನೆರವೇರಿಸಿ ಜಿ.ಟಿ.ದೇವೇಗೌಡ ಅಧಿಕೃತವಾಗಿ ಉನ್ನತ ಶಿಕ್ಷಣ ಇಲಾಖೆ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಟಿಡಿ, ‘ನಾನು ಗ್ರಾಮೀಣ ಭಾಗದಿಂದ ಬಂದವನು. ಹಾಗಾಗಿ, ಗ್ರಾಮೀಣ ಪ್ರದೇಶದ ಜೊತೆ ಇರುವ ಖಾತೆ ಬೇಕು ಎಂದು ಬಯಸಿದ್ದು ನಿಜ. ಅಲ್ಲದೆ, 8ನೇ ತರಗತಿ ವ್ಯಾಸಂಗ ಮಾಡಿರುವ ಜಿ.ಟಿ.ದೇವೆಗೌಡರು ಉನ್ನತ ಶಿಕ್ಷಣ ಇಲಾಖೆ ನಿರ್ವಹಿಸುತ್ತಾರಾ? ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ, ನಮ್ಮ ಮಕ್ಕಳಿಗೆ ಉನ್ನತ ವಿದ್ಯಾಭ್ಯಾಸ ಕೊಡಿಸಿದ್ದೇನೆ. ರಾಜ್ಯದ ವಿದ್ಯಾರ್ಥಿಗಳ ಉನ್ನತ ವಿಧ್ಯಾಭ್ಯಾಸಕ್ಕೂ ಹೆಚ್ಚಿನ ಗಮನ ನೀಡುತ್ತೇನೆ’ ಎಂದರು.

ಇಲಾಖೆಯಲ್ಲಿ ಸಾಕಷ್ಟು ಬದಲಾವಣೆ ಮಾಡಬೇಕಿದೆ. ಇನ್ಫೋಸಿಸ್ ಮಾದರಿಯಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡುವಂತಹ ವ್ಯವಸ್ಥೆ ತರಬೇಕಿದೆ ಎಂದು ಹೇಳಿದರು. ವಿಶ್ವವಿದ್ಯಾಲಯಗಳನ್ನು ನಗರ ಪ್ರದೇಶ ಮಾತ್ರವಲ್ಲದೆ ಗ್ರಾಮೀಣ ಪ್ರದೇಶಕ್ಕೂ ವಿಸ್ತರಿಸಬೇಕಿದೆ. ವೃತ್ತಿಪರ ಶಿಕ್ಷಣ ನೀಡಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಬೇಕು ಎಂದು ಜಿ.ಟಿ.ದೇವೇಗೌಡ ಹೇಳಿದರು.


ಸಂಬಂಧಿತ ಟ್ಯಾಗ್ಗಳು

GT Devegowda Higher education ಮಾಧ್ಯಮ ಇಲಾಖೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ