ದೆಹಲಿ ಹೈಕೋರ್ಟ್ ನಿರ್ದೇಶನದ ವಿರುದ್ದ ಮೇಲ್ಮನವಿ ಸಲ್ಲಿಸುವುದಿಲ್ಲ !

Kannada News

26-05-2017

ದೆಹಲಿ:- ದೆಹಲಿ ಹೈಕೋರ್ಟ್ ನೀಡಿರುವ ನಿರ್ದೇಶನದ ವಿರುದ್ದ  ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವುದಿಲ್ಲ ಎಂದು ಸಿಬಿಎಸ್ಇ ಸ್ಪಷ್ಟಪಡಿಸಿದೆ. ಸಿಬಿಎಸ್ಸಿ  ಈ ಹಿಂದೆ ಅನುಸರಿಸುತ್ತಿದ್ದ ಅಂಕ ಮಿತಿ ನಿಯಮವನ್ನು ಪುನಃ ಅಳವಡಿಸಿಕೊಳ್ಳುವಂತೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ, ನ್ಯಾಯಾಲಯದ ನಿರ್ದೇಶನದ ಮೇರೆಗೆ ಆ ನಿಯಮವನ್ನ ಅನುಸರಿಸಲು ಸಿಬಿಎಸ್ಇ ಮುಂದಾಗಿದೆ.
ಕೃಪಾಂಕ ಪದ್ಧತಿ ಮುಂದುವರಿಸಬೇಕು ಎಂದು ಹೈಕೋರ್ಟ್ ಹೇಳಿದ್ದು, ಹಾಗಾಗಿ   ಕೃಪಾಂಕ ನೀಡಿ ಫಲಿತಾಂಶ ಪ್ರಕಟಿಸಬೇಕಾದ ಅನಿವಾರ್ಯಕ್ಕೆ ಸಿಬಿಎಸ್ಇ ಸಿಲುಕಿದ್ದು ಶೀಘ್ರದಲ್ಲಿ ಫಲಿತಾಂಶ ಪ್ರಕಟಿಸುವುದಕ್ಕೆ ಸಿಬಿಸ್ ಇ ಮುಂದಾಗಿದೆ. ಸಿಬಿಎಸ್ ಇ ಅಡಿಯಲ್ಲಿ 12ನೇ ತರಗತಿ ಪರೀಕ್ಷೆ ತೆಗೆದುಕೊಂಡಿರುವ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ತುದಿಗಾಲಲ್ಲಿ ನಿಂತಿದ್ದಾರೆ. ಇಡೀ ಫಲಿತಾಂಶವೇ ಆ ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ದಿಕ್ಸೂಚಿಯಾಗಿರುವ ಹಿನ್ನೆಲೆಯಲ್ಲಿ ಫಲಿತಾಂಶವನ್ನು ಯಾವುದೇ ಕಾರಣಕ್ಕೂ ಮುಂದೂಡಬಾರದು ಹಾಗೂ ನಿಗದಿತ ಸಮಯದಲ್ಲೇ ಫಲಿತಾಂಶ ಪ್ರಕಟಿಸಬೇಕೆಂದು ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯು ಈಗಾಗಲೇ ಮಂಡಳಿಗೆ ತಾಕೀತು ಮಾಡಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ