ಪೊಲೀಸ್ ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

CM kumaraswamy strict instructions to police officials!

22-06-2018

ಬೆಂಗಳೂರು: ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದ ವರ್ಗಾವಣೆ ವಿಚಾರದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಮುಖ್ಯಮಂತ್ರಿಗಳು ಸಭೆ ನಡೆಸಿದರು. ಸಭೆಯಲ್ಲಿ ಗೃಹ ಖಾತೆ ನಿರ್ವಹಿಸುತ್ತಿರುವ ಡಿಸಿಎಂ ಪರಮೇಶ್ವರ್, ಡಿಜಿಪಿ ನೀಲಮಣಿ ರಾಜು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಪಾಲ್ಗೊಂಡಿದ್ದರು. ಪೊಲೀಸ್ ಇಲಾಖೆಯ ಸ್ಥಿತಿಗತಿ, ಕಾನೂನು ಸುವ್ಯವಸ್ಥೆ, ಇಲಾಖೆಯಲ್ಲಿನ ಮೂಲಸೌಕರ್ಯ ಸೇರಿದಂತೆ ಹಲವು ವಿಷಯಗಳ ಕುರಿತು ಸಿಎಂ ಸುದೀರ್ಘ ಚರ್ಚೆ ನಡೆಸಿದರು.

ಸಭೆ ಬಳಿಕ ಮಾಧ್ಯಮ ಗಳೊಂದಿಗೆ  ಮಾತನಾಡಿದ ಸಿಎಂ, ರಾಜ್ಯ ಪೊಲೀಸ್ ಇಲಾಖೆಯ ಒಂದು ಆ್ಯಪ್ ಕೂಡ ಬಿಡುಗಡೆ ಮಾಡಿದ್ದೇವೆ. ಎಲ್ಲಾದರೂ ಘಟನೆಗಳು ನಡೆದರೆ ತಕ್ಷಣ ಹತ್ತಿರದ ಪೊಲೀಸ್ ಠಾಣೆಗೆ ಇದರಿಂದ ಮಾಹಿತಿ ಸಿಗಲಿದೆ. ಇದನ್ನು ಸಾರ್ವಜನಿಕರು ಸಧ್ಬಳಕೆ ಮಾಡಿಕೊಳ್ಳಬೇಕೆಂದು ಕರೆ ನೀಡಿದರು.

ಪೊಲೀಸ್ ಇಲಾಖೆ ಜನಸ್ನೇಹಿಯಾಗಿ ಕೆಲಸ ಮಾಡಬೇಕು. ಜನರ ರಕ್ಷಣೆ ಮೂಲಕ ಸರ್ಕಾರಕ್ಕೆ ಗೌರವ ತಂದುಕೊಡುವುದು ಮುಖ್ಯ. ಹೀಗಾಗಿ ಇಲಾಖೆಗೆ ಅಗತ್ಯ ಸಲಹೆಗಳನ್ನು ಕೊಟ್ಟಿದ್ದೇನೆ. ಪೊಲೀಸ್ ಇಲಾಖೆ ರಾಜ್ಯದ ಮುಖವಾಣಿಯಂತೆ. ಪೊಲೀಸ್ ಇಲಾಖೆ ಚೆನ್ನಾಗಿದ್ದರೆ ಎಲ್ಲವೂ ಚೆನ್ನಾಗಿರುತ್ತೆ ಹಾಗಾಗಿ ನಾವು ಕೂಡ ಇಲಾಖೆಗೆ ಬೇಕಾದ ಸಹಕಾರ ಕೊಡುತ್ತೇವೆ ಎಂದು ಸಿಎಂ ಅಭಯ ನೀಡಿದರು.

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಯಾವುದೇ ಅಮಾಯಕರನ್ನು ಎಸ್ಐಟಿ ತಂಡ ಟಾರ್ಚರ್ ಮಾಡಿಲ್ಲ. ಬಂಧನವಾಗಿ ಬಿಡುಗಡೆಯಾದವರು ಪೊಲೀಸರ ಸೌಮ್ಯತೆಯ ಬಗ್ಗೆ ಈಗಾಗಲೇ ಹೇಳಿದ್ದಾರೆ, ಈ ಕೇಸ್ ನಲ್ಲಿ ಪೊಲೀಸರು ಬಹಳಷ್ಟು ಮಾಹಿತಿ ಕಲೆ ಹಾಕಿದ್ದಾರೆ ಎಂದು ಹೇಳಿದರು.


ಸಂಬಂಧಿತ ಟ್ಯಾಗ್ಗಳು

H.D.Kumaraswamy Police officers ಅಭಯ ಟಾರ್ಚರ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ