ಅನೈತಿಕ ಸಂಬಂಧ: ಜೋಡಿ ಕೊಲೆ!

illegal relationship:double murder

25-06-2018

ಹಾವೇರಿ: ಅನೈತಿಕ ಸಂಬಂಧ ಹಿನ್ನೆಲೆ ಹಾವೇರಿಯಲ್ಲಿ ಜೋಡಿ ಕೊಲೆ ನಡೆದಿದೆ. ಜಿಲ್ಲೆಯ ಸವಣೂರು ತಾಲ್ಲೂಕಿನ ಹತ್ತಿಮತ್ತೂರ ಗ್ರಾಮದಲ್ಲಿ ಘಟನೆ ನಡೆದಿದೆ. ಮಾರ್ತಂಡಪ್ಪ ಬಾರ್ಕಿ ಹಾಗೂ ಸುಧಾ ಬಾರ್ಕಿ ಕೊಲೆಯಾದವರು ಎಂದು ತಿಳಿದು ಬಂದಿದೆ. ಮೃತ ಮಾರ್ತಂಡಪ್ಪ ಅದೇ ಗ್ರಾಮ ಕೋಟೆಪ್ಪ ಎಂಬ ವ್ಯಕ್ತಿಯ ಹೆಂಡತಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ. ಈ ವಿಷಯ ತನ್ನ ಗಂಡ ಕೋಟೆಪ್ಪಗೆ ತಿಳಿಯುತ್ತಿದ್ದಂತೆ, ಕೆರಳಿದ ಈತ ಮಾರಕಾಸ್ತ್ರಗಳಿಂದ ಕೊಚ್ಚಿ ಮಾರ್ತಂಡಪ್ಪನನ್ನು ಕೊಲೆ ಮಾಡಿದ್ದಾನೆ. ಈ ವೇಳೆ ಬಿಡಿಸಲು ಬಂದ ತನ್ನ ಪತ್ನಿ ಸುಧಾಳನ್ನೂ ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಸವಣೂರು ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸವಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

Murder illegal relationship ಅನೈತಿಕ ಪರಿಶೀಲನೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ