ಧರ್ಮಸ್ಥಳಕ್ಕೆ ಸಚಿವ ಜಮೀರ್ ಅಹಮದ್ ಭೇಟಿ

minister zameer ahmed visiting to dharmasthala

25-06-2018

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಚಿವ ಜಮೀರ್ ಅಹಮದ್ ಅವರು ಇಂದು ಭೇಟಿ ನೀಡಲಿದ್ದಾರೆ. ಹೆಲಿಕಾಪ್ಟರ್ ಮೂಲಕ ಪ್ರಯಾಣ ಬೆಳೆಸಿದ್ದಾರೆ. ಸಚಿವ ಜಮೀ ಶ್ರೀಮಂಜುನಾಥನ ದರ್ಶನ ಪಡೆಯಲಿದ್ದು, ನಂತರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಭೇಟಿ ಯಾಗಲಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಅವರ ಜೊತೆ ಹಲವು ವಿಚಾರಗಳ ಕುರಿತು ಮಾತುಕತೆ ನಡೆಸಲಿದ್ದಾರೆ. ಹಜ್ ಭವನಕ್ಕೆ ಟಿಪ್ಪು ಹೆಸರಿಡುವ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಟಿಪ್ಪು ಹೆಸರಿನ ಬಗ್ಗೆ ಬಿಜೆಪಿ ನಾಯಕರ ತೀವ್ರ ಆಕ್ಷೇಪ ಹಿನ್ನೆಲೆ, ಸಿದ್ದರಾಮಯ್ಯನವರ ಸಲಹೆ ಪಡೆಯಲಿದ್ದಾರೆ ಎನ್ನಲಾಗಿದೆ.


ಸಂಬಂಧಿತ ಟ್ಯಾಗ್ಗಳು

zameer ahmed siddaramaiah ಹೆಲಿಕಾಪ್ಟರ್ ಹಜ್ ಭವನ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ