ಸಿದ್ದರಾಮಯ್ಯ ಬಂದ ನಂತರ ಸಮನ್ವಯ ಸಮಿತಿ ಸಭೆ:ಡಿಸಿಎಂ25-06-2018

ಬೆಂಗಳೂರು: ‘ರಾಜ್ಯ ವಿಧಾನಸಭಾ ಅಧಿವೇಶನ ಮುಂಚೆ ಮತ್ತು ಅಧಿವೇಶನದ ನಂತರ ಎಂದು ಸಚಿವ ಸಂಪುಟ ವಿಸ್ತರಣೆಗೆ ಡೇಟ್ ಫಿಕ್ಸ್ ಆಗಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆನ್ನೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಲು ಅವರನ್ನು ಭೇಟಿ ಮಾಡಿದ್ದೆ. ಈ ವೇಳೆ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಯಿತು ಎಂದು ತಿಳಿಸಿದರು.

ಸಿದ್ದರಾಮಯ್ಯ ಅವರು ಚಿಕಿತ್ಸೆ ಮುಗಿಸಿ ವಾಪಸ್ ಆದ ಬಳಿಕ ಸಮನ್ವಯ ಸಮಿತಿ‌ ಸಭೆ ನಡೆಸುತ್ತೇವೆ. ಸಭೆಯಲ್ಲಿ ಬಜೆಟ್ ಮಂಡನೆ ಬಗ್ಗೆ, ಮೈತ್ರಿ ಸರ್ಕಾರದ ಸಾಧಕ-ಬಾಧಕಗಳ ಚರ್ಚೆ ನಡೆಯಲಿದೆ ಎಂದರು.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ