ಇಬ್ಬರು ಪಿಎಸ್ಐಗಳ ವಿರುದ್ಧ ಕೇಸ್ ದಾಖಲು

complaint lodge against 2 psi in mahadevapura police station

25-06-2018

ಬೆಂಗಳೂರು: ಸಹಾಯಕ ಪೊಲೀಸ್ ಸಬ್‍ ಇನ್ಸ್ಪೆಕ್ಟರ್ ಸೇರಿ ಇಬ್ಬರು ಪೊಲೀಸರ ಮೇಲೆ ನ್ಯಾಯಾಲಯದ ಸೂಚನೆ ಮೇರೆಗೆ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹದೇವಪುರ ಠಾಣೆಯ ಎಎಸ್‍ಐ ಅಮೃತೇಶ್, ಮುಖ್ಯಪೇದೆ ಜೈಕಿರಣ್ ಮೇಲೆ ನ್ಯಾಯಾಲಯದ ಸೂಚನೆ ಮೇರೆಗೆ ಪಿಸಿಆರ್ ದಾಖಲಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕಳೆದ ಕೆಲ ತಿಗಳ ಹಿಂದೆ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಪ್ರಕಾಶ್ ಎನ್ನುವರನ್ನು ಪೊಲೀಸರು ವಶಕ್ಕೆ ಪಡೆದು ಹಲ್ಲೆ ಮಾಡಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಪೊಲೀಸರ ಹಲ್ಲೆ ಖಂಡಿಸಿ ಪ್ರಕಾಶ್ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದರು.

ದೂರು ಹಿಂಪಡೆಯುವಂತೆ ಪೊಲೀಸರು ಬೆದರಿಸಿ ಕಿರುಕುಳ ನೀಡಿದ್ದಾರೆ ಎಂದು ಪ್ರಕಾಶ್ ಮ್ಯಾಜಿಸ್ಟ್ರೇಟ್ ಕೋರ್ಟ್‍ನಲ್ಲಿ ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಕೋರ್ಟ್ ಸೂಚನೆ ಮೇರೆಗೆ ಇಬ್ಬರು ಪೊಲೀಸರ ವಿರುದ್ಧ ಮಹದೇವಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

inspector judicial ಎಎಸ್‍ಐ ಬೆದರಿಕೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ