ರೈತ ವಿರೋಧಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಶಾಸಕ

Farmers huge protest in front of mini vidhana soudha at mandya

25-06-2018

ಮಂಡ್ಯ: ಕೃಷ್ಣರಾಜಪೇಟೆ ಪಟ್ಟಣದ ಮಿನಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುತ್ತಿದ್ದ ರೈತ ಮುಖಂಡರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲಿಯೇ ಪರಿಹಾರ ದೊರಕಿಸಿಕೊಟ್ಟಿದ್ದಾರೆ ಶಾಸಕ ನಾರಾಯಣಗೌಡ.

ಬೂಕನಕೆರೆ ಗ್ರಾಮದ ರೈತ ಮುಖಂಡ ಅಂಗಡಿ ನಾಗರಾಜು ಅವರ ಜಮೀನಿಗೆ ಹೋಗಲು ದಾರಿ ಬಿಡಿಸಿಕೊಡುವಂತೆ ತಾಲ್ಲೂಕು ರೈತ ಸಂಘವು ಮನವಿ ಸಲ್ಲಿಸಿ ಕಳೆದ ಎರಡು ವರ್ಷಗಳಿಂದ ಅಡ್ಡಾಡಿ ಸಮಸ್ಯೆಗೆ ಪರಿಹಾರ ದೊರಕದ ಕಾರಣ ಇಂದು ನೂರಾರು ರೈತರು ಮಿನಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುತ್ತಿದ್ದರು. ವಿಧಾನಸೌಧದ ಒಳಗೆ ಕೆಂಪೇಗೌಡ ಜಯಂತಿ ಆಚರಣೆಯ ಸಂಬಂಧ ಪೂರ್ವಭಾವಿ ಸಭೆ ನಡೆಸುತ್ತಿದ್ದ ಶಾಸಕರು ರೈತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ರೈತರ ಬಳಿ ಹೋಗಿ ತಾವೂ ಧರಣಿಯಲ್ಲಿ ಭಾಗವಹಿಸಿ ರೈತ ವಿರೋಧಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಚಳಿ ಬಿಡಿಸಿದರು ಶಾಸಕ ನಾರಾಯಣಗೌಡ.

ತಹಶೀಲ್ದಾರ ಗುರುಸಿದ್ಧಯ್ಯ ಹಾಗೂ ಬೂಕನಕೆರೆ ಹೋಬಳಿ ರಾಜಸ್ವ ನಿರೀಕ್ಷಕ ರಾಜಮೂರ್ತಿ ಅವರು ಸ್ಥಳಕ್ಕೆ ಭೇಟಿ ನೀಡಿ ರಸ್ತೆ ಸಮಸ್ಯೆಯನ್ನು ಬಗೆಹರಿಸಿ ರೈತ ನಾಗರಾಜು ಅವರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ತಾಕೀತು ಮಾಡಿದರು. ಕಂದಾಯ ಇಲಾಖೆಯ ಎಲ್ಲಾ ವಿಭಾಗಗಳಿಗೂ ಭೇಟಿ ನೀಡಿದ ಶಾಸಕರು ಆಡಳಿತ ಯಂತ್ರಕ್ಕೆ ಹಾಗೂ ನೌಕರರಿಗೆ ಬಿಸಿ ಮುಟ್ಟಿಸಿದರು. ಜನಪರವಾಗಿ ಕೆಲಸ ಮಾಡದ ಅಧಿಕಾರಿಗಳು ಜಾಗ ಖಾಲಿ ಮಾಡುವಂತೆ ತಾಕೀತು ಮಾಡಿದರು.

 


ಸಂಬಂಧಿತ ಟ್ಯಾಗ್ಗಳು

Narayana gowda Mini vidhana soudha ತಹಶೀಲ್ದಾರ ಸಮಸ್ಯೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ