ಮೈತ್ರಿ ಸರ್ಕಾರ 5ವರ್ಷ ಪೂರೈಸುತ್ತದೆ: ಡಿಸಿಎಂ

our alliance government will complete 5 years: DCM

26-06-2018

ಚಿತ್ರದುರ್ಗ: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಚಿತ್ರದುರ್ಗದಲ್ಲಿ ಪತ್ರಕರ್ತರ ಮೇಲೆ ಸಿಡಿಮಿಡಿಗೊಂಡಿದ್ದಾರೆ. ಜಿಲ್ಲೆಯಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅಭಿಪ್ರಾಯದ ಬಗ್ಗೆ ಪ್ರತಿಕ್ರಿಯಿಸಿ, ‘ಮಾಜಿ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೋ ಗೊತ್ತಿಲ್ಲ. ನಾನು ಕೆಪಿಸಿಸಿ ಅಧ್ಯಕ್ಷನಾಗಿ ಹೇಳುತ್ತಿದ್ದೇನೆ, ಈ ಮೈತ್ರಿ ಸರ್ಕಾರ ಐದು ವರ್ಷ ಪೂರೈಸುತ್ತದೆ. ಸಮ್ಮಿಶ್ರ ಸರ್ಕಾರ ರಚನೆ ವೇಳೆ ಐದು ವರ್ಷದ ಒಪ್ಪಂದ ಆಗಿದೆ ಎಂದು ತಿಳಿಸಿದರು.

‘ನಂತರ ನೀವು ತಿರುಗಿಸಿ ಅದನ್ನೇ ಕೇಳಿದರೆ ನಾನು ಅದನ್ನೇ ಹೇಳ್ತೀನಿ ಎಂದು ಪತ್ರಕರ್ತರ ಮೇಲೆ ಗರಂ ಆದರು. ರಾಜಕಾರಣದಲ್ಲಿ ಯಾವ ಸಂದರ್ಭದಲ್ಲಿ ಏನಾಗುತ್ತದೆಂದು ಯಾರೂ ಹೆಳೋಕಾಗಲ್ಲ, ಒಪ್ಪಂದದಂತೆ ನಾವು ಐದು ವರ್ಷ ಸರ್ಕಾರ ನಡೆಸುತ್ತೇವೆಂದಷ್ಟೇ ಹೇಳುತ್ತೇನೆ' ಎಂದರು.


ಸಂಬಂಧಿತ ಟ್ಯಾಗ್ಗಳು

G.Parameshwara KPCC ಸಿದ್ದರಾಮಯ್ಯ ಪತ್ರಕರ್ತ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ