ಉಡುಪಿಯಲ್ಲಿ ಮತ್ತೆ ವರುಣನ ಆರ್ಭಟ

Again heavy Rain at udupi

27-06-2018

ಉಡುಪಿ: ಕಳೆದ ಒಂದು ವಾರದಿಂದ ಉಡುಪಿಯಲ್ಲಿ ಮಳೆಯಾಗುತ್ತಿದ್ದು, ನಿನ್ನೆ ವಿಶ್ರಾಂತಿ ಎಂಬಂತೆ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿತ್ತು. ಆದರೆ, ಮಳೆ ಕಡಿಮೆಯಾಗಿದೆ ಎಂದು ನಿಟ್ಟುಸಿರು ಬಿಡುವಷ್ಟರಲ್ಲೇ ಮತ್ತೆ ಮಳೆಯ ಆರ್ಭಟ ಹೆಚ್ಚಾಗಿದೆ. ನಿನ್ನೆ ರಾತ್ರಿ ಪ್ರಾರಂಭವಾದ ಮಳೆ ಇದುವರೆಗೂ ಮುಂದುವರೆದಿದೆ. ಉಡುಪಿ ನಗರ ಸೇರಿದಂತೆ ಜಿಲ್ಲೆಯ ಬೈಂದೂರು, ಹೆಬ್ರಿ, ಎಣ್ಣೆಹೊಳೆ, ಕೊಲ್ಲೂರು ಭಾಗದಲ್ಲಿ ಮಳೆ ಬಿಡುವು ಕೊಡದೆ ಸರಿಯುತ್ತಿದೆ. ನಿರಂತರ ಮಳೆಯಿಂದಾಗಿ ಸಮುದ್ರ ಅಬ್ಬರ ಕೊಂಚ ಬಿರುಸುಗೊಂಡಿದೆ. ಮಲ್ಪೆ, ಕಾಪು, ಉದ್ಯಾವರ, ಮಟ್ಟು  ಪ್ರದೇಶದಲ್ಲಿ ಸ್ವಲ್ಪ ಪ್ರಮಾಣದ ಕಡಲ್ಕೊರೆತ ಮುಂದುವರಿದಿದೆ. ನಾಡದೋಣಿ ಮೀನುಗಾರರಿಗೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮುನ್ಸೂಚನೆ ನೀಡಿದೆ. ಉತ್ತಮ ಮಳೆಯಿಂದಾಗಿ‌ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.


ಸಂಬಂಧಿತ ಟ್ಯಾಗ್ಗಳು

Udupi Heavy Rain ನಾಡದೋಣಿ ಮೀನುಗಾರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ