ಪ್ರವಾಸಿ ಮಂದಿರದಲ್ಲಿ 18 ಮಂದಿ ಜೂಜುಕೋರರ ಬಂಧನ

18 gamblers arrested at chamarajanagar

27-06-2018

ಚಾಮರಾಜನಗರ: ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದ ಪ್ರವಾಸಿ ಮಂದಿರದಲ್ಲಿ ಜೂಜಾಡುತ್ತಿದ್ದ 18 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಯಳಂದೂರು ಸಿಪಿಐ ನೇತೃತ್ವದಲ್ಲಿ ನಿನ್ನೆ ಮಧ್ಯ ರಾತ್ರಿ ಜೂಜು ಅಡ್ಡೆ ಮೇಲೆ ದಾಳಿ ನಡೆಸಿ ಬಂಧಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಈ ರೀತಿಯ ಅಕ್ರಮ ಚಟುವಟಿಕೆಗಳು ಪ್ರವಾಸಿ ಮಂದಿರದಲ್ಲಿ ನಡೆಯುತ್ತಿದ್ದು, ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ. ದಾಳಿ ವೇಳೆ 51,2850 ರೂ. ನಗದು, 2 ಕಾರು ಹಾಗೂ 3 ಬೈಕ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಯಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ