ಸಿದ್ದರಾಮಯ್ಯ ಜೊತೆಗೆ ಮಾತನಾಡುವೆ:ಖರ್ಗೆ

I will Speak with Siddaramaiah: Kharge

27-06-2018

ಬೆಂಗಳೂರು: ‘ಮೈತ್ರಿ ಸರ್ಕಾರಕ್ಕೆ ಎಲ್ಲರೂ ಶಕ್ತಿ ತುಂಬುವ ಕೆಲಸ ಮಾಡಬೇಕು. ಮೈತ್ರಿ ಸರ್ಕಾರ ಒಗ್ಗಟ್ಟಾಗಿ ಇದೆ. ಎಷ್ಟು ತೊಂದರೆಗಳು ಬಂದರೂ ಮೈತ್ರಿ ಸರ್ಕಾರ ಮುನ್ನೆಡೆಸಬೇಕಿದೆ. ಕೋಮುವಾದಿ ಬಿಜೆಪಿಯನ್ನು ದೂರ ಇಡುವುದು ನಮ್ಮ ಗುರಿ. ಅದಕ್ಕಾಗಿಯೇ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದೇವೆ’ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ನವ ದೆಹಲಿಯಲ್ಲಿ ಹೇಳಿದ್ದಾರೆ.

ವಿಭಿನ್ನ ಹೇಳಿಕೆಗಳು ಮಾಧ್ಯಮಗಳಲ್ಲಿ ವರದಿಯಾಗಿವೆ. ಇವು ವಾಸ್ತವ ಹೇಳಿಕೆಗಳೋ ಅಥವ ಮಾಧ್ಯಮಗಳಲ್ಲಿ ತಿರುಚಲಾಗಿದೆಯೋ ಪರಿಶೀಲಿಸಲಾಗುವುದು. ಭಿನ್ನ ಹೇಳಿಕೆ ನೀಡುತ್ತಿರುವ ನಾಯಕರ ಅಭಿಪ್ರಾಯ ಕೇಳಲಿದ್ದೇವೆ ಎಂದು ಖರ್ಗೆ ಸ್ಪಷ್ಟಪಡಿಸಿದ್ದಾರೆ.

ಸಮ್ಮಿಶ್ರ ಸರಕಾರದ ಭವಿಷ್ಯದ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ವಿಚಾರದ ಕುರಿತು ನಾಳೆ ಅಥವ ನಾಡಿದ್ದು ಸಿದ್ದರಾಮಯ್ಯರನ್ನು ಭೇಟಿಯಾಗಲಿದ್ದೇನೆ. ಭೇಟಿಯಾಗಿ ಅವರ ಜೊತೆ ಮಾತಕತೆ ನಡೆಸುತ್ತೇನೆ. ವೀಡಿಯೋ ಬಗ್ಗೆ ವಿಶೇಷ ಮಾಹಿತಿ ಇಲ್ಲ. ನಾನೂ ಟಿವಿಯಲ್ಲಿ ನೋಡಿದ್ದೇನೆ ಅಷ್ಟೇ. ಯಾವ ಸಂದರ್ಭದಲ್ಲಿ ಹೇಳಿದ್ದಾರೆ ಅನ್ನೋದು ಗೊತ್ತಿಲ್ಲ. ವೀಡಿಯೋವನ್ನು ತಿರುಚಿರುವ ಸಾಧ್ಯತೆ ಇದೆ ಎಂದು ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಪಟ್ಟಿದ್ದಾರೆ.

ನಿಜವಾಗಿಯೂ ಸಿದ್ದರಾಮಯ್ಯ ಏನು ಹೇಳಿದ್ದಾರೋ ಅವರನ್ನೇ ಕೇಳಬೇಕಿದೆ. ಕಾಂಗ್ರೆಸ್ ಹೈಕಮಾಂಡ್ ಕೂಡ ಗಮನಿಸುತ್ತಿದೆ ಎಂದು ತಿಳಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ