ಅಖಾಡಕ್ಕಿಳಿದ ಜೆಡಿಎಸ್ ವರಿಷ್ಠ ದೇವೇಗೌಡರು

H.D.Devegowda may meet congress High command at delhi!

27-06-2018

ಬೆಂಗಳೂರು: ನಾಳೆ ರಕ್ಷಣಾ ಇಲಾಖೆ ಸಮಿತಿಯ ಸಭೆ ಹಿನ್ನೆಲೆ ಮಾಜಿ ಪ್ರಧಾನಿ ದೇವೇಗೌಡರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಇದರ ಮಧ್ಯೆ ಯಾವುದೇ ಕಾಂಗ್ರೆಸ್ ನಾಯಕರ ಜೊತೆಗೆ ದೇವೇಗೌಡರ ಅಧಿಕೃತ ಭೇಟಿಗೆ ನಿಗದಿಯಾಗಿಲ್ಲ. ಆದರೆ, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ನಡೆಯುತ್ತಿರುವ ಹಿನ್ನೆಲೆ ಕಾಂಗ್ರೆಸ್ ನಾಯಕರೇ ದೇವೇಗೌಡರನ್ನು ಭೇಟಿ ಮಾಡುವ ಸಾಧ್ಯತೆಗಳಿವೆ.

ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮುಖಂಡರನ್ನು ದೇವೇಗೌಡರು ಭೇಟಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ಈ ವೇಳೆ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಬಳಿ ದೂರು ನೀಡುವ ಸಾಧ್ಯತೆಗಳನ್ನು ತಳ್ಳಿಹಾಕುವಂತಿಲ್ಲ. ಸಿದ್ದರಾಮಯ್ಯನವರ ಹೇಳಿಕೆಗಳಿಂದ ಸರ್ಕಾರಕ್ಕೆ ಇರಿಸುಮುರಿಸು ಉಂಟುಮಾಡುತ್ತಿದೆ. ಸಿದ್ದರಾಮಯ್ಯರನ್ನ ಕಂಟ್ರೋಲ್ ಮಾಡಿ, ಇಲ್ಲ ಸಮ್ಮಿಶ್ರ ಸರ್ಕಾರ ನಡೆಸೋದು ಕಷ್ಟ. ಅವರನ್ನು ನೀವೇ ಕಂಟ್ರೋಲ್ ಮಾಡಬೇಕು. ಇಲ್ಲದಿದ್ದರೆ ಸರ್ಕಾರ ನಡೆಸೋದು ಕಷ್ಟ ಎಂದು ಮನವಿಗೆ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.


ಸಂಬಂಧಿತ ಟ್ಯಾಗ್ಗಳು

H.D.Deve Gowda High command ಕಂಟ್ರೋಲ್ ಸಾಧ್ಯತೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ