ಬೆಂಗಳೂರಿಗೆ ಕೇಂದ್ರ ಕಾಂಗ್ರೆಸ್ ನಾಯಕರ ದಂಡು?

central congress leaders may come to bangalore this weekend?

27-06-2018

ಬೆಂಗಳೂರು: ವಾರಾಂತ್ಯದೊಳಗೆ ಕೇಂದ್ರ ಕಾಂಗ್ರೆಸ್ ನಾಯಕರ ದಂಡು ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅನುಬಂಧ ಬೆಸೆದಿದ್ದು ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್. ಆದರೆ, ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರದ ಬಗ್ಗೆ ನೀಡಿರುವ ಹೇಳಿಕೆ ವಿಡಿಯೋ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಕಾಂಗ್ರೆಸ್ ನಾಯಕರಿಂದ ಮೈತ್ರಿ ಸರ್ಕಾರಕ್ಕೆ ಕಿರಿಕಿರಿಯಾಗುತ್ತಿದೆ, ಈ ಕುರಿತು ಕೇಂದ್ರ ಕಾಂಗ್ರೆಸ್ ನಾಯಕರು ಮಧ್ಯ ಪ್ರವೇಶಕ್ಕೆ ಜೆಡಿಎಸ್ ನಾಯಕರು ಪಟ್ಟು ಹಿಡಿದಿದ್ದಾರೆ ಎಂಬ ಮಾತುಗಳೂ ಸಹ ಕೇಳಿ ಬರುತ್ತಿವೆ. ಕಾಂಗ್ರೆಸ್ ನಾಯಕರು ಮೈತ್ರಿ ಸರ್ಕಾರದ ವಿಚಾರವಾಗಿ ಡ್ಯಾಮೇಜ್ ಹೇಳಿಕೆ ಅಭಿಪ್ರಾಯ ಹೊರಹಾಕುವಂತಿಲ್ಲ. ಈ ಸಂಬಂಧ ಎರಡು ಪಕ್ಷಗಳ ಉಭಯ ನಾಯಕರೊಂದಿಗೆ ಮಾತುಕತೆ ಮಾಡಲು ಗುಲಾಂ ನಬಿ ಆಜಾದ್ ಬರಲು ತೀರ್ಮಾನಿಸಲಾಗಿದೆ ಎನ್ನಲಾಗಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೂಚನೆ ಮೇರೆಗೆ ಬೆಂಗಳೂರಿಗೆ ಬರುವ ಸಾಧ್ಯತೆಗಳಿವೆ.


ಸಂಬಂಧಿತ ಟ್ಯಾಗ್ಗಳು

Ghulam Nabi Azad AICC ಡ್ಯಾಮೇಜ್ ಉಭಯ ನಾಯಕ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ