ಧಾರಾಕಾರ ಮಳೆ: ಭಾಗಮಂಡಲ ಜಲಾವೃತ

Heavy rain at bhagamandala

28-06-2018

ಮಡಿಕೇರಿ: ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಹಿನ್ನೆಲೆ, ಮಡಿಕೇರಿ ತಾಲ್ಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಡಿಡಿಪಿಐ ಮಂಜುಳಾ ಅವರು ಆದೇಶ ಹೊರಡಿಸಿದ್ದಾರೆ. ನಿನ್ನೆಯಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ರಜೆ ನೀಡಲಾಗಿದೆ. ಭಾರೀ ಮಳೆಗೆ ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೊಮ್ಮೆ ಜಲಾವೃತವಾಗಿದೆ. ಭಾಗಮಂಡಲ-ನಾಪೋಕ್ಲು ರಸ್ತೆ ಸಂಪರ್ಕ ಕಡಿತಕೊಂಡಿದೆ. ಮಳೆ ಹೀಗೆಯೇ ಮುಂದುವರೆದರೆ, ತಲಕಾವೇರಿಗೆ ರಸ್ತೆ ಸಂಪರ್ಕ ಕೂಡ ಕಡಿತವಾಗುವ ಸಾಧ್ಯತೆ ಇದೆ. ತಲಕಾವೇರಿ ವ್ಯಾಪ್ತಿಯಲ್ಲಿ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಮೈದುಂಬಿ ಹರಿಯುತ್ತಿದೆ ಕಾವೇರಿ.


ಸಂಬಂಧಿತ ಟ್ಯಾಗ್ಗಳು

Kodagu Bhagamandala ನಾಪೋಕ್ಲು ಸಂಗಮ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ