ವಿಷ ಸೇವಿಸಿ ರೈತ ಆತ್ಮಹತ್ಯೆ

Farmer committed suicide by consuming poison

28-06-2018

ಹಾಸನ: ಅರಕಲಗೂಡು ತಾಲ್ಲೂಕಿನ ದೊಡ್ಡಗಾವನಹಳ್ಳಿ ಗ್ರಾಮದಲ್ಲಿ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಜೇಗೌಡ (55) ಮೃತ ರೈತ. ಕೃಷಿಗಾಗಿ ಮಾಡಿದ್ದ ಸಾಲವನ್ನು ತೀರಿಸಲಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ತನ್ನ ಜಮೀನಿನ ಬಳಿಯೇ ವಿಷ ಸೇವಿಸಿ ಮೃತಪಟ್ಟಿದ್ದಾರೆ. ಸುಮಾರು ಒಂದು ಲಕ್ಷದ ಎಪ್ಪತ್ತು ಸಾವಿರ ಸಾಲ ಮಾಡಿದ್ದರು. ಬ್ಯಾಂಕ್ ಅಧಿಕಾರಿಗಳು ಮನೆ ಬಳಿ ವಸೂಲಾತಿಗೆ ಬಂದ ಹಿನ್ನೆಲೆ ಮನ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Farmer Suicide ಅಧಿಕಾರಿ ವಿಷ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ