ಧರ್ಮಸ್ಥಳದಿಂದ ಹೊರಟ ಸಿದ್ದರಾಮಯ್ಯ

Ex-CM siddaramaiah returned from dharmasthala

28-06-2018

ಬೆಂಗಳೂರು: ಧರ್ಮಸ್ಥಳದ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿದ್ದರಾಮಯ್ಯ ಅವರು ಬೆಂಗಳೂರಿಗೆ ಹೊರಡುವ ಮುನ್ನ ವೈದರೊಂದಿಗೆ ಸಂವಾದ ನಡೆಸಿದರು. ಬಳಿಕ ರಾಜ್ಯದ ನಾನಾ ಜಿಲ್ಲೆಗಳಿಂದ ಬಂದಿದ್ದ ಪಕ್ಷದ ಕಾರ್ಯಕರ್ತರು, ಮುಖಂಡರು, ಅಭಿಮಾನಿಗಳನ್ನು ಭೇಟಿಯಾದರು.

ಆಸ್ಪತ್ರೆ ಸಿಬ್ಬಂದಿ ಜೊತೆಗೂ ಸಿದ್ದರಾಮಯ್ಯ ಅವರು ಮಾತುಕತೆ ನಡೆಸಿ ಅಲ್ಲಿಂದ ಹೊರಟರು. ಇದಕ್ಕೂ ಮುನ್ನ ಸಿದ್ದರಾಮಯ್ಯ ಅವರು 12ದಿನಗಳ ಕಾಲ ಚಿಕಿತ್ಸೆ ನೀಡಿದ ಡಾ.ಪ್ರಶಾಂತ್ ಶೆಟ್ಟಿ ನೇತೃತ್ವದ ವೈದ್ಯರ ತಂಡಕ್ಕೆ ಕೃತಜ್ಞತೆ ಸಲ್ಲಿಸಿದ್ದರು. ತಮ್ಮ ಯೋಗಕ್ಷೇಮ ವಿಚಾರಿಸಲು ಬಂದಿದ್ದ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗ್ಗಡೆ ಅವರಿಗೆ ವಿಶೇಷ ಧನ್ಯವಾದ ತಿಳಿಸಿದರು. ಶಾಂತಿ ವನದ ಕಾರ್ಯದರ್ಶಿಗಳಾದ ಸೀತಾರಾಮ ಶೆಟ್ಟಿಯವರು ಸಿದ್ದರಾಮಯ್ಯ ಅವರನ್ನು ಬೀಳ್ಕೊಟ್ಟರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ