ಮಾಧ್ಯಮಗಳ ಜೊತೆ ಅಂತರ ಕಾಯ್ದುಕೊಳ್ಳಿ: ಪರಮೇಶ್ವರ್

Kpcc chairman meeting with MLAs headed DCM

28-06-2018

ಬೆಂಗಳೂರು: ನಗರದ ಕೆಪಿಸಿಸಿ ಕಚೇರಿಯಲ್ಲಿ ಉಪ ಮುಖ್ಯಮಂತ್ರಿಗಳು ಹಾಗು ಕೆಪಿಸಿಸಿ ಅಧ್ಯಕ್ಷರೂ ಆಗಿರುವಂತಹ ಡಾ.ಜಿ.ಪರಮೇಶ್ವರ ಅವರ ನೇತೃತ್ವದಲ್ಲಿ ಸಚಿವರ ಜೊತೆ ಸಭೆ ನಡೆದಿದೆ. ಸಭೆಯಲ್ಲಿ ಮಾತನಾಡಿದ ಪರಮೇಶ್ವರ್ ಅವರು, ಆದಷ್ಟು ಮಾಧ್ಯಮಗಳ ಜೊತೆ ಅಂತರ ಕಾಯ್ದುಕೊಳ್ಳುವಂತೆ ಸಲಹೆ ನೀಡಿದ್ದಾರೆ. ಊಹಾಪೋಹದ ಸುದ್ದಿಗಳನ್ನು ಅವರು ಮಾಡುತ್ತಿದ್ದಾರೆ. ಅದರ ಕಡೆ ನೀವು ಗಮನಹರಿಸಬೇಡಿ, ಮಾಧ್ಯಮಗಳಿಗೆ ರಾಜಕೀಯದ ಬಗ್ಗೆ ಹೇಳಿಕೆ ನೀಡಬೇಡಿ, ಇಲಾಖಾವಾರು ಅಭಿವೃದ್ಧಿ, ಸಮಸ್ಯೆಯ ಬಗ್ಗೆ ಮುಕ್ತವಾಗಿ ಮಾತನಾಡಿ ಎಂದು ಸಲಹೆ ನೀಡಿದ್ದಾರೆ.

‘ಸಿದ್ದರಾಮಯ್ಯನವರು ನಮ್ಮ ನಾಯಕರು, ಅವರಿಗೆ ನಾವೆಲ್ಲರೂ ಗೌರವಕೊಡಬೇಕು. ಅವರನ್ನು ನಾನೂ ಸಹ ಭೇಟಿ ಮಾಡಿ ಮಾತನಾಡಿದ್ದೇನೆ, ಹಾಗೇ ನೀವು ಹೋಗಿದ್ದೀರಿ, ಅದರಲ್ಲಿ ತಪ್ಪೇನಿಲ್ಲ. ಮಾಧ್ಯಮಗಳು ಯಾವ ಸುದ್ದಿಬೇಕಾದರೂ ಮಾಡಿಕೊಳ್ಳಲಿ, ಅದರ ಬಗ್ಗೆ ನೀವು ಗಮನಕೊಡಬೇಡಿ' ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದೆ, ಅದಕ್ಕೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಿ, ನಿಮ್ಮ ವ್ಯಾಪ್ತಿಯ ಶಾಸಕರ ಜೊತೆ ಸಂಬಂಧ ಸುಧಾರಿಸಿಕೊಳ್ಳಿ, ಕ್ಷೇತ್ರದ ಸಮಸ್ಯೆಗಳಿದ್ದರೆ ಬಗೆಹರಿಸಿ ಕೊಡಿ ಎಂದು ಕಾಂಗ್ರೆಸ್ ನ ಹಿರಿಯ ಮುಖಂಡರು ಸೇರಿದಂದೆ ಕೆಪಿಸಿಸಿ ಅಧ್ಯಕ್ಷರೂ ಸಲಹೆ ಮಾಡಿದ್ದಾರೆ.

ಸಭೆ ನಂತರ ಮಾತನಾಡಿದ ಸಚಿವ ಯು.ಟಿ.ಖಾದರ್ ಅವರು, ಮೈತ್ರಿ ಸರ್ಕಾರ ಸುಗಮವಾಗಿ ಸಾಗುವ ಕುರಿತು ಸಭೆಯಲ್ಲಿ ‌ಚರ್ಚೆ ನಡೆಯಿತು, ಪಕ್ಷ ಬಲಿಷ್ಠ ಗೊಳಿಸುವ ಬಗ್ಗೆ ಮಾತ್ರ ಚರ್ಚೆ ನಡೆದಿದೆ. ಸಿದ್ದರಾಮಯ್ಯ ವಿಚಾರವಾಗಿ ಏನು ಮಾತನಾಡಿಲ್ಲ ಎಂದು ತಿಳಿಸಿದರು.


ಸಂಬಂಧಿತ ಟ್ಯಾಗ್ಗಳು

Siddaramaiah G. Parameshwara ಲೋಕಸಭಾ ಯು.ಟಿ.ಖಾದರ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ