ನಿಲ್ಲದ ಮಳೆರಾಯ ಜನಜೀವನ ಅಸ್ತವ್ಯಸ್ತ

again heavy rain at madikeri and chikmagalur

28-06-2018

ಉಡುಪಿ: ಒಂದೆರೆಡು ದಿನ ಬಿಡುವು ಕೊಟ್ಟಿದ್ದ ಮಳೆರಾಯ ಮತ್ತೆ ಉಡುಪಿ ಮತ್ತು ಚಿಕ್ಕಮಗಳೂರು, ಮಲೆನಾಡಿನ ಹಲವಡೆ ಅಬ್ಬರಿಸಿದ್ದಾನೆ. ನಿನ್ನೆಯಿಂದ ಉಡುಪಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಇಂದು ಕೂಡ ಮಳೆ ಮುಂದುವರೆದಿದ್ದು, ಕುಂದಾಪುರ, ಕಾರ್ಕಳ, ಹೆಬ್ರಿ ಸೇರಿದಂತೆ ಉಡುಪಿ ನಗರದಾದ್ಯಂತ ಭಾರೀ ಮಳೆಯಾಗುತ್ತಿದೆ. ಬೈಂದೂರಿನ ಒತ್ತಿನೆಣೆಯಲ್ಲಿ ಗುಡ್ಡಗಳ ಕುಸಿಯುತ್ತಿದ್ದು, ರಕ್ಷಣೆಗೆಂದು ಅಳವಡಿಸಿದ ಸ್ಲೋಪ್ ಪ್ರೊಟೆಕ್ಷನ್ ವಾಲ್ ಕಡೆಗಳಲ್ಲಿ ಗುಡ್ಡದ ಮಣ್ಣು ಶೇಖರಣೆಯಾಗುತ್ತಿದೆ, ಗುಡ್ಡ ಕುಸಿತ ಮುಂದುವರೆದರೆ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆಗಳಿವೆ.

ಚಿಕ್ಕಮಗಳೂರಿನಲ್ಲೂ ನಿನ್ನೆ ರಾತ್ರಿಯಿಂದ‌ ಧಾರಕಾರವಾಗಿ ಮಳೆ ಸುರಿಯುತ್ತಿದೆ. ಜಿಲ್ಲೆಯ ಕೊಪ್ಪ, ಶೃಂಗೇರಿ, ಎನ್.ಆರ್.ಪುರ, ಮೂಡಿಗೆರೆ ಸೇರಿದಂತೆ, ಚಾರ್ಮಾಡಿ, ಕಳಸ, ಬಾಳೆಹೊನ್ನೂರು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯಿಂದ ಜನಜೀವನ‌ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಳೆಗೆ ತುಂಗಾ-ಭದ್ರಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿವೆ.


ಸಂಬಂಧಿತ ಟ್ಯಾಗ್ಗಳು

madikeri Rivers ಅಸ್ತವ್ಯಸ್ಥ ಮಲೆನಾಡು


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ