ಬಿಎಸ್ವೈ ನಿವಾಸದಲ್ಲಿ ಮತ್ತೊಂದು ಸಭೆ

B.S.yeddyurappa had one more meeting with bjp leaders

28-06-2018

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು ರಾಜ್ಯ ಬಿಜೆಪಿ ವಲಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೊನ್ನೆಯಷ್ಟೇ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿ‌ಯ ನಿವಾಸದಲ್ಲಿ ಬಿಜೆಪಿ ಮುಖಂಡರೊಂದಿಗೆ ಸಭೆ ನಡೆಸಿದ್ದರು. ಸಭೆಯಲ್ಲಿ ಬಿಜೆಪಿ ನಾಯಕರಾದ ಜಗದೀಶ್ ಶೆಟ್ಟರ್, ಮುರುಗೇಶ್ ನಿರಾಣಿ, ಉಮೇಶ್ ಕತ್ತಿ ಇನ್ನಿತರೆ ನಾಯಕರು ಭಾಗಿಯಾಗಿದ್ದರು. ಸಭೆ ನಂತರ ಉಮೇಶ್ ಕತ್ತಿ ಹೇಳಿಕೆ ನೀಡಿ, ಅವಕಾಶ ಸಿಕ್ಕರೆ ಸರ್ಕಾರ ರಚಿಸುತ್ತೇವೆ ಎಂದು ಹೇಳಿ ಸಂಚಲನ ಮೂಡಿಸಿದ್ದರು.

ಇದೀಗ ಇಂದೂ ಕೂಡ  ಬಿಎಸ್ವೈ ನಿವಾಸದಲ್ಲಿ ಬಿಜೆಪಿ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿದ್ದಾರೆ. ನಾಳೆ ನಡೆಯಲಿರುವ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ, ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಶೋಭಾ ಕರಂದ್ಲಾಜೆ, ಅರವಿಂದ ಲಿಂಬಾವಳಿ, ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಸಭೆಯಲ್ಲಿ ಉಪಸ್ಥಿತರಿದ್ದರು.



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ