ಕೃಷಿ ಹೊಂಡಕ್ಕೆ ಬಿದ್ದು ಯುವಕ ಸಾವು

A 19 year old boy died in a pond at bellary

28-06-2018

ಬಳ್ಳಾರಿ: ಸಲ್ಮಾನ್ ಎಂಬ ಹತ್ತೊಂಬತ್ತು ವರ್ಷದ ಯುವಕ ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿದ್ದಾನೆ. ಬಳ್ಳಾರಿ ಜಿಲ್ಲೆಯ ಕೊಟ್ಟೂರು ತಾಲ್ಲೂಕಿನ ತೂಲಹಳ್ಳಿ ಗ್ರಾಮದಲ್ಲಿದ ಘಟನೆ ಬೆಳಕಿಗೆ ಬಂದಿದೆ. ಮೃತ ಯುವಕ ಪಟ್ಟಣದ ಸರ್ಕಾರಿ ಪಿಯು ಕಾಲೇಜ್ ನಲ್ಲಿ ಪಿಯುಸಿ ಮುಗಿಸಿ ಕೃಷಿ ಕೆಲಸ ಮಾಡುತ್ತಿದ್ದನು ಎಂದು ತಿಳಿದು ಬಂದಿದೆ. ಇಂದು ಮುಂಜಾನೆ ನೀರು ಕುಡಿಯಲು ಕೃಷಿ ಹೊಂಡಕ್ಕೆ ಇಳಿದಿದ್ದು , ಕಾಲು ಜಾರಿ ಬಿದ್ದು ನೀರಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಇನ್ನು ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಶವ ಹೊರ ತೆಗೆದಿದ್ದಾರೆ. ಯುವಕನನ್ನು ಕಳೆದುಕೊಂಡ ಪೋಷಕರ ಕುಟುಂಬ ಶೋಕದಲ್ಲಿ ಮುಳುಗಿದೆ. ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

death pond ಶವ ಮುಳುಗಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ