ಶಾಂತಿವನದಲ್ಲಿ ಅಶಾಂತಿ ಸೃಷ್ಟಿಸುತ್ತಿರುವ ಸಿದ್ದರಾಮಯ್ಯ: ಶೋಭಾ28-06-2018

ಬೆಂಗಳೂರು: ಶಾಂತಿವನದಲ್ಲಿ ಕುಳಿತು ಅಶಾಂತಿ ಮೂಡಿಸುವ ಕೆಲಸವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಟೀಕಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಕಳೆದ ಕೆಲ ದಿನಗಳಿಂದ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ‌ ಸಿದ್ದರಾಮಯ್ಯ ವಿಶ್ರಾಂತಿ ಪಡೆಯುತ್ತಿದ್ದಾರೆ. ಆದರೆ ಅಲ್ಲಿನ ಶಾಂತಿವನದಲ್ಲಿ ಕುಳಿತುಕೊಂಡೇ ರಾಜ್ಯ ರಾಜಕೀಯದಲ್ಲಿ ಅಶಾಂತಿ ಸೃಷ್ಟಿಸುತ್ತಿದ್ದಾರೆ, ರಾಜ್ಯದ ರಾಜಕಾರಣದಲ್ಲಿ ಬದಲಾವಣೆಗೆ ಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಸಮ್ಮಿಶ್ರ ಸರ್ಕಾರ ಇನ್ನೂ ಟೇಕ್ ಆಫ್ ಆಗಿಲ್ಲ, ಆಡಳಿತದ ನೇತೃತ್ವ ವಹಿಸಿರುವ ಕುಮಾರಸ್ವಾಮಿ ಕಾಂಗ್ರೆಸ್ ನಾಯಕರನ್ನು ಸಮಾಧಾನಪಡಿಸುವುದರಲ್ಲೇ ಕಾಲಕಳೆಯುತ್ತಿದ್ದಾರೆ. ಕಾಂಗ್ರೆಸ್, ಜೆಡಿಎಸ್ ಎರಡೂ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ, ಉಭಯ ಪಕ್ಷಗಳ ನಾಯಕರು ಕಿತ್ತಾಟದಲ್ಲಿ ಮುಳುಗಿದ್ದಾರೆ ಎಂದು ಆರೋಪಿಸಿದರು.

ನಾಳೆ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯುತ್ತಿದ್ದು ಸಭೆಯಲ್ಲಿ ಎಲ್ಲವನ್ನೂ ಚರ್ಚಿಸಲಾಗುತ್ತದೆ, ಸಾಲಮನ್ನಾ ಮಾಡದಿದ್ದರೆ ಏನು ಮಾಡಬೇಕು, ಸಮ್ಮಿಶ್ರ ಸರ್ಕಾರದ ವೈಫಲ್ಯದ ವಿರುದ್ಧ ಹೇಗೆ ಹೋರಾಟ ನಡೆಸಬೇಕು ಹಾಗು ಲೋಕಸಭಾ ಚುನಾವಣಾ ಸಿದ್ಧತೆ ಕುರಿತು ಚರ್ಚೆ ನಡೆಸಲಾಗುತ್ತದೆ ಎಂದರು.


ಸಂಬಂಧಿತ ಟ್ಯಾಗ್ಗಳು

shobha karandlaje siddaramaiah ನಾಯಕ ಸಾಲಮನ್ನಾ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ