ಕೊಟ್ಟ ಹಣ ವಾಪಸ್ಸು ಕೇಳಿದ್ದಕ್ಕೆ ಚಾಕುವಿನಿಂದ ಇರಿತ !

Kannada News

26-05-2017

ಬೆಂಗಳೂರು:- ಸಾಲವಾಗಿ ಕೊಟ್ಟ ಹಣ ವಾಪಸ್ಸು ಕೇಳಿದ್ದಕ್ಕೆ ವ್ಯಕ್ತಿಯೊಬ್ಬ ಬಾರ್ ಮಾಲೀಕರಿಗೆ ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ಗುರುವಾರ ರಾತ್ರಿ ನಂದಿನಿ ಲೇಔಟ್‌ನಲ್ಲಿ ನಡೆದಿದೆ. ಗಾಯಗೊಂಡಿರುವ ಬಾರ್ ಮಾಲೀಕ ಲಕ್ಕಣ್ಣ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಂಠೀರವ ಸ್ಟುಡಿಯೋದ ರಾಜ್ ಕುಮಾರ್ ಸಮಾಧಿ ಬಳಿಯ ಕಾವೇರಿ ಬಾರ್ ಮಾಲೀಕ ಲಕ್ಕಣ್ಣ, ಎರಡು ವರ್ಷಗಳ ಹಿಂದೆ ನವೀನ್ ಎಂಬವರಿಗೆ ೭ ಲಕ್ಷ ರೂ. ಹಣವನ್ನು ಸಾಲವಾಗಿ ನೀಡಿದ್ದರು ಆದರೆ ಇಲ್ಲಿಯವರೆಗೆ ನವೀನ್ ಹಣ ವಾಪಸ್ಸು ಕೊಟ್ಟಿರಲಿಲ್ಲ. ಇದೇ ವಿಚಾರವಾಗಿ ನಿನ್ನೆ ರಾತ್ರಿ ಕಾವೇರಿ ಬಾರ್ ಬಳಿ ಇಬ್ಬರ ಮಧ್ಯೆ ವಾಗ್ವಾದ ನಡೆದು ಈ ವೇಳೆ ನವೀನ್, ಲಕ್ಕಣ್ಣಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ತನಿಖೆ ಮುಂದುವರೆದಿದೆ.

 


ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ