ರಾಜ್ಯದಲ್ಲಿ ಚೀನಾ ಬಂಡವಾಳ ಹೂಡಿಕೆ:ಸಿಎಂ

China

28-06-2018

ಬೆಂಗಳೂರು: ಚೀನಾ ದೇಶ ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಆಸಕ್ತಿ ತೋರಿಸಿದ್ದು, ಆ ದೇಶದ ನಿಯೋಗದ ಸುಮಾರು 16 ಸದಸ್ಯರೊಂದಿಗೆ ಚರ್ಚೆ ಮುಂದುವರೆದಿದೆ ಎಂದು ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಪೂರಕವಾದ ನಿಟ್ಟಿನಲ್ಲಿ ಬಂಡವಾಳ ಹೂಡಿಕೆ ಬಗ್ಗೆ ಸುದೀರ್ಘ ಚರ್ಚೆಯಾಗಿದೆ. ನಾಳೆಯಿಂದ ಮೂರು ದಿನಗಳ ಕಾಲ ನಮ್ಮ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಚರ್ಚೆ ನಡೆಯಲಿದೆ.

ರಾಜ್ಯದಲ್ಲಿ ಬಂಡವಾಳ ಹೂಡುವ ನಿಟ್ಟಿನಲ್ಲಿ ಅದು ಸ್ಮಾಟ್ ಸಿಟಿ ಇರಬಹುದು. ನಮ್ಮ ಬೆಂಗಳೂರು ಟ್ರಾನ್ಸ್ ಪೋರ್ಟ್ ಸಿಸ್ಟಮ್ ಇರಬಹುದು ಹೀಗೆ ಹಲವಾರು ವಿಚಾರಗಳ ಬಗ್ಗೆ ಚರ್ಚೆ ಮಾಡಲು ಬಂದಿದ್ದಾರೆ ಎಂದು ಸಿಎಂ ತಿಳಿಸಿದರು.

ಚೀನಾ ಸರ್ಕಾರ ಮತ್ತು ನಮ್ಮ ಸರ್ಕಾರ ನಡುವೆ ಒಂದು ಎಂಐಒ ಮಾಡಿ ಒಂದು ದೊಡ್ಡ ಮಟ್ಟದ ಬಂಡವಾಳ ಹೂಡುವ ನಿಟ್ಟಿನಲ್ಲಿ ಆಸಕ್ತಿ ಹೊಂದಿದ್ದಾರೆ. ಅದರ ಬಗ್ಗೆ ಪ್ರಾರಂಭಿಕ ಹಂತದ ಚರ್ಚೆ ನಡೆಯುತ್ತಿದೆ ಎಂದು ಕುಮಾರಸ್ವಾಮಿ ತಿಳಿಸಿದರು.


ಸಂಬಂಧಿತ ಟ್ಯಾಗ್ಗಳು

China India ಬಂಡವಾಳ ಆಸಕ್ತಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ