ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ 10 ಕೋಟಿ

10 crore check given to Minority Development Corporation

29-06-2018

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ 10 ಕೋಟಿ ರೂ. ಗಳ ಚೆಕ್ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ವಿನೋತ್‍ಪ್ರಿಯಾ ಅವರಿಗೆ ಹಸ್ತಾಂತರಿಸಿದರು.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಶಕ್ತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಆಹಾರ ಮತ್ತು ನಾಗರೀಕ ಪೂರೈಕೆ, ಗ್ರಾಹಕರ ವ್ಯವಹಾರಗಳು, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಜಮೀರ್ ಅಹಮದ್ ಖಾನ್, ಅಲ್ಪಸಂಖ್ಯಾತರ ಇಲಾಖೆ ಸರ್ಕಾರದ ಕಾರ್ಯದರ್ಶಿ ಮಹಮ್ಮದ್ ಮೊಸಿನ್, ಕರ್ನಾಟಕ ಇಲಾಖೆ ವ್ಯವಸ್ಥಾಪಕ ನಿರ್ದೇಶಕ ಇಸ್ಲಾವುದ್ದೀನ್ ಜೆ. ಗದ್ಯಾಳ ಸೇರಿದಂತೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

 

 

 

 



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ