ಕರಾವಳಿ ಭಾಗದಲ್ಲಿ ಎದುರಾಗಿದೆ ಪ್ರವಾಹದ ಭೀತಿ!

Heavy Rain in karavali region

29-06-2018

ಕಾರವಾರ: ಮಲೆನಾಡಿನಾದ್ಯಂತ ಮುಂಗಾರು ಬಿರುಸುಗೊಂಡಿದ್ದು, ಈ ಭಾಗದ ಹಲವು ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಅತಿಹೆಚ್ಚು ಮಳೆಯಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲ್ಲೂಕುಗಳಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದ ಶರಾವತಿ ನದಿ ತುಂಬಿ ಹರಿಯುತ್ತಿದೆ. ದಿನದಿಂದ ದಿನಕ್ಕೆ ಮಳೆ ಹೆಚ್ಚಾಗುತ್ತಿದ್ದು, ಪ್ರವಾಹದ ಭೀತಿ ಎದುರಾಗಿದೆ. ಅದಲ್ಲದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡಗಳು ಕುಸಿಯುವ ಭೀತಿಯಿಂದ ವಾಹನ ಸವಾರರು ಕಂಗಾಲಾಗಿದ್ದಾರೆ. ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಇದರ ಬೆನ್ನಲ್ಲೆ ಪ್ರವಾಹವನ್ನು ಎದುರಿಸಲು ಜಿಲ್ಲಾಡಳಿತ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.

 

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ