ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಕೆಂಡಾಮಂಡಲ!

Health minister Shivanand Patil suddenly visited taluk hospital of kushtagi

29-06-2018

ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲ್ಲೂಕು ಆಸ್ಪತ್ರೆಗೆ ಆರೋಗ್ಯ ಸಚಿವ ಶಿವಾನಂದ ಪಾಟೀಲ್ ದಿಢೀರ್ ಭೇಟಿ ನೀಡಿದ್ದಾರೆ. ಈ ವೇಳೆ ಆಸ್ಪತ್ರೆ ಕಾರ್ಯವೈಖರಿ ಕಂಡು ಕೆಂಡಾಮಂಡಲರಾಗಿದ್ದಾರೆ ಸಚಿವರು. ಆಸ್ಪತ್ರೆ ಅವ್ಯವಸ್ಥೆ ಕಂಡು ವೈದ್ಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೇಂದ್ರ ಸ್ಥಳದಲ್ಲಿಯೇ ಕಾರ್ಯನಿರ್ವಹಿಸುವಂತೆ ವೈದ್ಯರು ಸೇರಿದಂತೆ ಸಿಬ್ಬಂದಿಗೆ ಸೂಚಿಸಿದ್ದಾರೆ. ಔಷಧಿ ಕೊರತೆ ಸರಬರಾಜಿಗೆ ಸ್ಥಳದಲ್ಲಿಯೇ ಹಿರಿಯ ಅಧಿಕಾರಿಗಳಿಗೆ ಸಮಸ್ಯೆ ಪರಿಹರಿಸುವಂತೆ ಆದೇಶಿಸಿದರು. ವಿಜಯಪುರಕ್ಕೆ ತೆರಳುವ ದಾರಿ ಮಧ್ಯೆ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ ಸಚಿವರು.


ಸಂಬಂಧಿತ ಟ್ಯಾಗ್ಗಳು

Helath shivanand patil ಕಾರ್ಯವೈಖರಿ ಕೆಂಡಾಮಂಡಲ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ