ಹೊಲದಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಚಿರತೆ ದಾಳಿ

cheetah attacks on 2 people at tumkur

29-06-2018

ತುಮಕೂರು: ಹೊಲದಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಚಿರತೆ ದಾಳಿ ಮಾಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ತುಮಕೂರಿನ ಮಧುಗಿರಿ ತಾಲ್ಲೂಕಿನ ಮಲ್ಲನೇಹಳ್ಳಿಯಲ್ಲಿ ಘಟನೆ ನಡೆದಿದೆ. ಚಿರತೆ ದಾಳಿಗೊಳಗಾದ ಕರಿಯಣ್ಣ (55) ಶಿವಣ್ಣ (49) ಇಬ್ಬರ ಸ್ಥಿತಿ ಗಂಭೀರವಾಗಿದೆ. ಇಂದು ಬೆಳಿಗ್ಗೆ 8ಗಂಟೆ ಸುಮಾರಿನಲ್ಲಿ ಎಂದಿನಂತೆ ತಮ್ಮ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಇಬ್ಬರ ಮೇಲೂ ಚಿರತೆ ದಾಳಿ ಮಾಡಿ ತೀವ್ರಗಾಗಿ ಗಾಯಗೊಳಿಸಿದೆ. ಗಾಯಾಳುಗಳನ್ನು ಮಧುಗಿರಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವರೆಗೂ 100ಕ್ಕೂ ಹೆಚ್ಚು ಕುರಿಗಳನ್ನು ಚಿರತೆ ಕೊಂದು ತಿಂದಿದೆ, ಎಂದು ಗ್ರಾಮಸ್ಥರು ಹೇಳುತ್ತಿದ್ದು, ಈ ಕುರಿತು ಎಷ್ಟು ಬಾರಿ ಅಧಿಕಾರಗಳ ಗಮನಕ್ಕೆ ತಂದು, ದೂರು ನೀಡಿದರೂ ಯಾವುದೇ ಪ್ರಯೋಜನವಾಗಲಿಲ್ಲ ಎಂದು ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಡವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಸಂಬಂಧಿತ ಟ್ಯಾಗ್ಗಳು

Cheeta Farmers ಕುರಿ ಪ್ರಯೋಜನ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ