ಆಸ್ತಿ ವಿವರ ಸಲ್ಲಿಸಲು ಶಾಸಕರಿಗೆ ನಾಳೆ ಕೊನೆ ದಿನ

Tomorrow is the last date for MLAs to file the property details

29-06-2018

ಬೆಂಗಳೂರು: ಶಾಸಕರು ಹಾಗೂ ಅವರ ಕುಟುಂಬದ ಸದಸ್ಯರ ಆಸ್ತಿ ಮತ್ತು ದಾಯಿತ್ವಗಳ ಪಟ್ಟಿಯನ್ನು ಲೋಕಾಯುಕ್ತಕ್ಕೆ ಸಲ್ಲಿಸಲು ನಾಳೆ ಕಡೆ ದಿನವಾಗಿದೆ. ಹದಿನೈದನೇ ವಿಧಾನಸಭೆಗೆ ಆಯ್ಕೆಯಾಗಿರುವ ಸದಸ್ಯರು 2017-18ನೇ ಸಾಲಿಗೆ ಸಂಬಂಧಿಸಿದ ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರ ಆಸ್ತಿ ಮತ್ತು ದಾಯಿತ್ವದ ಪಟ್ಟಿಯನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕಾಗಿದೆ.

ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸಿದ ಮಾಹಿತಿಯನ್ನು ವಿಧಾನಸಭೆ ಸಚಿವಾಲಯಕ್ಕೆ ತಿಳಿಸಲು  ಸೂಚಿಸಲಾಗಿದೆ. ವಿಧಾನಸಭೆ ಹಾಗೂ ವಿಧಾನ ಪರಿಷತ್ ಸದಸ್ಯರು ಪ್ರತಿ ವರ್ಷ ತಮ್ಮ ಹಾಗೂ ತಮ್ಮ ಕುಟುಂಬದ ಆಸ್ತಿ ವಿವರಗಳನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕಾಗಿದೆ. ಕರ್ನಾಟಕ ಲೋಕಾಯುಕ್ತ ಅಧಿನಿಯಮ 1984ರ ಕಲಂ 7ರ ಉಪಕಲಂ (1)ರಡಿ ಆಯಾ ವರ್ಷದ ಜೂನ್ 30ರೊಳಗೆ ಆಸ್ತಿ ವಿವರಗಳನ್ನು ನಿಗದಿತ ನಮೂನೆಯಲ್ಲಿ ಸಲ್ಲಿಸಬೇಕು.


ಸಂಬಂಧಿತ ಟ್ಯಾಗ್ಗಳು

Lokayukta MLA's ಸಚಿವಾಲಯ ಕುಟುಂಬ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ