‘ಮೈತ್ರಿ ಸರ್ಕಾರದಿಂದ ಯಾವುದೇ ವರ್ಗದ ಬಗ್ಗೆ ಭೇದ-ಭಾವ ಇಲ್ಲ’29-06-2018

ಬೆಂಗಳೂರು: ರಾಜ್ಯದಲ್ಲಿರುವ ಮೈತ್ರಿ ಸರ್ಕಾರ ಯಾವುದೇ ವರ್ಗದ ಬಗ್ಗೆ ಭೇದ-ಭಾವ ವ್ಯಕ್ತಪಡಿಸದೆ ಸರ್ವರನ್ನು ಒಂದೇ ದೃಷ್ಟಿಯಲ್ಲಿ ಮನಗಂಡು ಆಡಳಿತ ನಿರ್ವಹಣೆ ಮಾಡಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸಾಮಾನ್ಯ ಕನಿಷ್ಠ ಕಾರ್ಯಕ್ರಮದಲ್ಲಿ ಭಾಗವಹಿಸುವ ಮುನ್ನ ವರದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಧ್ಯೇಯೋದ್ದೇಶಗಳನ್ನು ಸ್ಪಷ್ಟಪಡಿಸಿದರು.ಇದೇ ಸಂದರ್ಭದಲ್ಲಿ ಮಾತನಾಡಿದ ಕಂದಾಯ ಸಚಿವ ಆರ್.ವಿ. ದೇಶಪಾಂಡೆ, ನಿರೀಕ್ಷೆಯಂತೆ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ಬಜೆಟ್ ಮಂಡಿಸಲಿದ್ದಾರೆ ಎಂದು ತಿಳಿಸಿದರು. ಸಮ್ಮಿಶ್ರ ಸರ್ಕಾರದ ಕನಿಷ್ಠ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಎರಡೂ ಪಕ್ಷಗಳ ನಾಯಕರಲ್ಲಿ ಯಾವುದೇ ಭಿನ್ನಮತ, ಗೊಂದಲಗಳಿಲ್ಲ ಎಂದರು.

ಭಾನುವಾರ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಸಭೆ ನಡೆಯಲಿದ್ದು, ಅದಕ್ಕೆ ಪೂರಕವಾಗಿ ಈ ಸಭೆ ನಡೆಯುತ್ತಿದ್ದು, ಮುಂದಿನ 5 ವರ್ಷಗಳಲ್ಲಿ ಮೈತ್ರಿ ಸರ್ಕಾರದಲ್ಲಿ ಧಕ್ಕೆಯಾಗದ ರೀತಿಯಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಕುರಿತು ಚರ್ಚೆ ನಡೆಸಲಾಗುವುದು ಎಂದು ಹೇಳಿದರು.

ಇದೇ ವೇಳೆ ಮಾತನಾಡಿದ ಸಚಿವ ದೇಶಪಾಂಡೆ, ಮೈತ್ರಿ ಸರ್ಕಾರದ ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳ ಅನುಷ್ಠಾನಕ್ಕೆ 5 ಮಂದಿ ಸದಸ್ಯರನ್ನೊಳಗೊಂಡ ಸಮಿತಿ ವರದಿ ಸಿದ್ಧಪಡಿಸಿದ್ದು, ಯೋಜನೆಗಳು ಹಾಗೂ ಸೇರಿಸಬೇಕಾದ ಮತ್ತು ತೆಗೆಯಬೇಕಾದ ವಿಷಯಗಳ ಕುರಿತು ಸಮಾಲೋಚಿಸಿ ನಾಳೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಿದ್ದರಾಮಯ್ಯ ನೇತೃತದ ಸರ್ಕಾರ ನೀಡಿದ್ದ ಜನಪ್ರಿಯ ಯೋಜನೆಗಳನ್ನು ಈ ಬಾರಿಯ ಮುಂಗಡ ಪತ್ರದಲ್ಲೂ ಮುಂದುವರೆಸಲಾಗುತ್ತದೆ. ಈ ವಿಚಾರದಲ್ಲಿ ಸಂದೇಹಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.


ಸಂಬಂಧಿತ ಟ್ಯಾಗ್ಗಳು

D.K.Shivakumar H.D.kumaraswamy ಸರ್ಕಾರ ಧ್ಯೇಯೋದ್ದೇಶ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ