ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯೊಬ್ಬರ ಬಂಧನ

suspected man arrested and case filed at sakleshpur!

30-06-2018

ಹಾಸನ: ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಬ್ಯಾಕರವಳ್ಳಿ ವೃತ್ತದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದು, ಪೊಲೀಸರು ಈತನನ್ನು ಗಮನಿಸಿ, ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ, ಚಾಕು ಮತ್ತು ಕಾರದಪುಡಿ ಇನ್ನಿತರ ವಸ್ತುಗಳು ಕಂಡುಬಂದಿದ್ದು ವಶಕ್ಕೆ ಪಡೆದಿದ್ದಾರೆ. ದರೋಡೆ ಮಾಡುವ ಉದ್ದೇಶದಿಂದ ಚಾಕು ಮತ್ತು ಕಾರದಪುಡಿ ಇಟ್ಟುಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆರೋಪಿ ಕೇರಳ ಮೂಲದವನಾಗಿದ್ದು, ದ್ವಿಚಕ್ರ ವಾಹನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಯಸಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

suspected man tools ವಾಹನ ದ್ವಿಚಕ್ರ ವಾಹನ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ