ಡಿವೈಎಸ್ಪಿ ಕಚೇರಿ ಮುಂದೆ ಮಹಿಳೆಯರ ಅಹೋರಾತ್ರಿ ಧರಣಿ!

Women sitting in front of the DYSP office and protesting

30-06-2018

ರಾಮನಗರ: ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ವಕ್ಷೇತ್ರದಲ್ಲಿ ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ. ಚನ್ನಪಟ್ಟಣದ ಪುರ ಪೊಲೀಸ್ ಠಾಣೆಯ ಡಿವೈಎಸ್ಪಿ ಕಚೇರಿ ಮುಂದೆ ಕುಳಿತು ಮಹಿಳೆಯರು ಧರಣಿ ನಡೆಸುತ್ತಿದ್ದಾರೆ. ಅಲ್ಲದೆ ಅಹೋರಾತ್ರಿ ಪ್ರತಿಭಟನಾ ಧರಣಿ ನಡೆಸಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ. ಸ್ವರಾಜ್ ಸಂಘಟನೆಯ ಮಹಿಳಾ ಕಾರ್ಯಕರ್ತರು ಧರಣಿ ಕುಳಿತಿದ್ದಾರೆ. ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಪೊಲೀಸ್ ಇಲಾಖೆ ಚನ್ನಪಟ್ಟಣದಲ್ಲಿ ನಿಷ್ಕ್ರಿಯವಾಗಿದೆ ಎಂದು ಮಹಿಳೆಯರು ಆರೋಪಿಸಿದ್ದಾರೆ. ಪೊಲೀಸರು ಚುರುಕಾಗಿ ಕೆಲಸ ಮಾಡಲು ಶೀಘ್ರವೇ ಅಧಿಕಾರಿಗಳಿಗೆ ಸರ್ಕಾರ ಸೂಚಿಸಬೇಕೆಂದು ಒತ್ತಾಯಿಸಿದ್ದಾರೆ. 


ಸಂಬಂಧಿತ ಟ್ಯಾಗ್ಗಳು

H.D.Kumaraswamy Womens ಸ್ವಕ್ಷೇತ್ರ ಧರಣಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ