ವ್ಯಾಪಾರಿಯೊಬ್ಬರ ಅನುಮಾನಾಸ್ಪದ ಸಾವು!

A suspicious death of a man!

02-07-2018 333

ಚಿಕ್ಕಬಳ್ಳಾಪುರ: ಜಿಲ್ಲೆಯ ಮಂಚೇನಹಳ್ಳಿ ಬಳಿಯ ನಾಮಗೊಂಡ್ಲು ಗ್ರಾಮದಲ್ಲಿ ಕಡ್ಡಿಪುಡಿ ವ್ಯಾಪಾರಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಹಿಂದೂಪುರ ಮೂಲದ ವೆಂಕಟೇಶ್ (47) ಮೃತ ದುರ್ದೈವಿ. ವ್ಯಾಪಾರಕ್ಕಾಗಿ ಹಿಂದೂಪುರದಿಂದ ಬಂದಿದ್ದ ವೆಂಕಟೇಶ್ ಸಾವನ್ನಪ್ಪಿದ್ದಾರೆ. ಹಣ ಕಾಸಿನ ವಿಷಯ ಕುರಿತು ಯಾರೋ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಮಂಚೇನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಡರಾತ್ರಿ ಕೊಲೆ ನಡೆದಿರಬಹುದೆಂದು ಅನುಮಾನ ವ್ಯಕ್ತಪಡಿಸಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Murder Hindupur ಪೊಲೀಸರು ಅನುಮಾನ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ