ವಿವಿಧ ಬೇಡಿಕೆಗಳಿಗೆ ಒತ್ತಾಯ: ರೈತರ ಭಾರೀ ಪ್ರತಿಭಟನೆ

Force demand for various demands: a massive protests by farmers

02-07-2018

ಹಾವೇರಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹಾವೇರಿಯಲ್ಲಿ ವಿವಿಧ ರೈತ ಸಂಘಟನೆಗಳು ಭಾರೀ ಪ್ರತಿಭಟನೆ ನಡೆಸಿದ್ದಾರೆ. ಬೆಳೆ ವಿಮೆ, ಬೆಳೆ ಪರಿಹಾರ, ರೈತರ ಸಂಪೂರ್ಣ ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆ ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳಸಾ ಬಂಡೂರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜಕೀಯ ಬೇಡ. ಕೂಡಲೇ ಈ ಜಲ ವಿವಾದವನ್ನು ಕೇಂದ್ರ ಸರ್ಕಾರ ಬಗೆಹರಿಸಲು ಒತ್ತಾಯಮಾಡಿದ್ದಾರೆ.

ರೈತರ ಸಾಲಮನ್ನಾ ಮಾಡುವ ಭರವಸೆ ನೀಡಿದ್ದ ಕುಮಾರಸ್ವಾಮಿ ಮಾತು ತಪ್ಪಿದ್ದಾರೆ. ರಾಷ್ಟ್ರೀಕೃತ ಮತ್ತು ಸಹಕಾರಿ ಬ್ಯಾಂಕ್ ಗಳ ಸಂಪೂರ್ಣ ಸಾಲಮನ್ನಾ ಆಗಬೇಕು ಎಂದು ಆಗ್ರಹಿಸಿದ್ದಾರೆ. ಉತ್ತರ ಕರ್ನಾಟಕದ ಅಭಿವೃದ್ಧಿಯಲ್ಲಿ ಕುಂಠಿತವಾಗುತ್ತಿದೆ ಎಂದು ಆರೋಪಿಸಿದ್ದಾರೆ. ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡುವಂತೆ ಒತ್ತಾಯಿಸಿದ್ದಾರೆ. ನಗರದ ಹುಕ್ಕೇರಿ ಮಠದಿಂದ ಸಿದ್ದಪ್ಪ ಸರ್ಕಲ್ ವರೆಗೂ ಮೆರವಣಿಗೆ ಜಾಥಾ ನಡೆಸಿದರು. ಪ್ರತಿಭಟನೆಯಲ್ಲಿ ಹಾವೇರಿ, ಗದಗ, ಧಾರವಾಡ ಜಿಲ್ಲೆಯ ನೂರಾರು ರೈತರು ಭಾಗಿಯಾಗಿದ್ದರು.


ಸಂಬಂಧಿತ ಟ್ಯಾಗ್ಗಳು

protest Farmers ಬೇಡಿಕೆ ಸಾಲಮನ್ನಾ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ