‘ಹೊಸ ಬಾಂಬ್’ ಸಿಡಿಸಿದ ಶಾಸಕ ಉಮೇಶ್ ಕತ್ತಿ

one more sensation statement by MLA Umesh Katti

02-07-2018

ಬೆಳಗಾವಿ: ಮೊನ್ನೆಯಷ್ಟೆ ಯಡಿಯೂರಪ್ಪ ನಿವಾಸದಲ್ಲಿ ನಡೆದ ಸಭೆ ನಂತರ, 'ಅವಕಾಶ ಸಿಕ್ಕರೆ ಸರ್ಕಾರ ರಚಿಸಲಿದ್ದೇವೆ ಎಂದು ಹೇಳಿದ್ದ ಬಿಜೆಪಿ ಮುಖಂಡ ಉಮೇಶ್ ಕತ್ತಿ, ಸಂಚಲನ ಮೂಡಿಸಿದ್ದರು. ಇದೀಗ ಮತ್ತೊಂದು ಹೊಸ ಬಂಬ್ ಸಿಡಿಸಿದ್ದಾರೆ.

ಬಿಜೆಪಿ ಮುಖಂಡ ಹಾಗೂ ಹುಕ್ಕೇರಿ ಶಾಸಕರೂ ಆಗಿರುವ ಉಮೇಶ ಕತ್ತಿ. ಹುಕ್ಕೇರಿ ತಾಲ್ಲೂಕಿನಲ್ಲಿ ಹಿರಣ್ಯಕೇಶಿ ನದಿಯಿಂದ ಕೆರೆ ತುಂಬುವ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ‘ಮುಂದಿನ 6 ತಿಂಗಳ ಒಳಗೆ ಯಡಿಯೂರಪ್ಪ ಮುಖ್ಯಮಂತ್ರಿ ಆಗುವುದು ನಿಶ್ಚಿತ. ಬಿಜೆಪಿ ಅಧಿಕಾರಕ್ಕೆ ಬಂದೇ ಬರುತ್ತೆ ಕಾದು ನೋಡಿ’ ಎಂಬ ಹೇಳಿಕೆ ನೀಡಿದ್ದಾರೆ.

'ಬಿಜೆಪಿಯ ಯಾವುದೇ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿ ಇಲ್ಲ. ಸಚಿವ ರಮೇಶ ಜಾರಕಿಹೊಳಿ ಹಾಗೂ ಯಾವುದೇ ಕಾಂಗ್ರೆಸ್ ನಾಯಕರು ಸಂಪರ್ಕದಲ್ಲಿ ಇಲ್ಲ' ಎಂದು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಬಜೆಟ್ ಅಧಿವೇಶನದಲ್ಲಿ ರೈತರ ಬೆಳೆ ಸಾಲವನ್ನ ಮಾತ್ರ ಮನ್ನಾ ಮಾಡುವರಿದ್ದಾರೆ. ಈ ಬಾರಿಯೂ ವಚನ ಭ್ರಷ್ಟ ಆಗದೇ ನುಡಿದಂತೆ ಬೆಳೆ ಸಾಲದ ಜೊತೆಗೆ ಸಂಪೂರ್ಣ ಸಾಲ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

 


ಸಂಬಂಧಿತ ಟ್ಯಾಗ್ಗಳು

Umesh Katti Farmers ಬಜೆಟ್ ಅಧಿವೇಶನ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ