ಕೆಎಸ್ಆರ್ಟಿಸಿ ಬಸ್ ಪಲ್ಟಿ: ಚಾಲಕ ಪರಾರಿ

KSRTC Bus pulty: 4 students injured

02-07-2018

ಹಾವೇರಿ: ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿ ನಾಲ್ವರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿರುವ ಘಟನೆ ಹಿರೇಕೆರೂರ ತಾಲ್ಲೂಕಿನ ಹಿರೇಮೊರಬ ಗ್ರಾಮದ ಬಳಿ ನಡೆದಿದೆ. ಮಾಸುರಿಂದ ರಾಣೆಬೆನ್ನೂರ ಕಡೆ ಹೊರಟಿದ್ದ ಬಸ್ ಮಾರ್ಗ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ ನಲ್ಲಿದ್ದ ಸುಮಾರು 27 ಜನ ಪ್ರಾಣಾಪಾಯದಿಂದ ಪಾರಾಗಿದ್ದು, ನಾಲ್ವರು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಮಾಸುರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ನಂತರ ಬಸ್ ಚಾಲಕ ಮತ್ತು ನಿರ್ವಾಹಕ ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಹಿರೇಕೆರೂರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹಿರೇಕೆರೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 


ಸಂಬಂಧಿತ ಟ್ಯಾಗ್ಗಳು

KSRTC Accident ವಿದ್ಯಾರ್ಥಿ ನಿಯಂತ್ರಣ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ