ಅಮಾಯಕರನ್ನು ವಂಚಿಸುತ್ತಿದ್ದ ಇಬ್ಬರು ಪೇದೆಗಳ ಬಂಧನ

cheating for money: 2 police constable arrested

02-07-2018

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಡಿವೈಎಸ್ಪಿ, ಎಸ್‍ಐ, ಎಫ್‍ಡಿಎ ಇನ್ನಿತರ ಉದ್ಯೋಗ ಕೊಡಿಸುತ್ತೇವೆ ಎಂದು ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ಇಬ್ಬರು ಜಿಲ್ಲಾ ಸಶಸ್ತ್ರ ಪಡೆ(ಸಿಎಆರ್)ಯ ಪೊಲೀಸ್ ಪೇದೆಗಳನ್ನು ಬಂಧಿಸುವಲ್ಲಿ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ)ಪೊಲೀಸರು ಯಶಸ್ವಿಯಾಗಿದ್ದಾರೆ.

ಲೋಕೇಶ್ ಹಾಗೂ ಲಕ್ಷ್ಮಣ್ ಬಂಧಿತ ಸಿಎಆರ್ ಪೊಲೀಸ್ ಪೇದೆಗಳಾಗಿದ್ದಾರೆ. ಆರೋಪಿಗಳು ಪೊಲೀಸ್ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಸುಮಾರು 18 ಕೋಟಿ ರೂಪಾಯಿ ವಂಚನೆ ಮಾಡಿರುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಬಂಧಿತ ಆರೋಪಿಗಳು ಡಿವೈಎಸ್ಪಿ, ಎಸ್‍ಐ, ಎಫ್‍ಡಿಎ, ಎಸ್‍ಡಿಎ ಹಾಗೂ ಪೊಲೀಸ್ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಅಮಾಯಕರಿಗೆ ವಂಚಿಸಿದ್ದರು. ಹಲವು ದಿನಗಳಿಂದ ಇವರಿಬ್ಬರೂ ಇದೇ ವೃತ್ತಿ ಮಾಡಿಕೊಂಡು ಬಂದಿದ್ದಾರೆ. ಅಲ್ಲದೇ ನಕಲಿ ಅಂಕಪಟ್ಟಿಗಳನ್ನು ಸಿದ್ಧಪಡಿಸಿ ಡಿವೈಎಸ್ಪಿ ಕೆಲಸ ಕೂಡ ಕೊಡಿಸುವುದಾಗಿ ಮೋಸ ಮಾಡಿದ್ದಾರೆ.

ಸುಮಾರು 30ಕ್ಕೂ ಹೆಚ್ಚು ಜನರಿಗೆ ವಂಚನೆ ಮಾಡಿದ್ದರು. ಪೊಲೀಸ್ ಇಲಾಖೆಯ ಸಿಬ್ಬಂದಿಯಾಗಿದ್ದರಿಂದ ಜನರು ನಂಬಿ ಕೆಲಸ ಸಿಗುತ್ತದೆ ಎಂಬ ಆಸೆಯಿಂದ ಲಕ್ಷಾಂತರ ರೂಪಾಯಿ ಕೊಟ್ಟಿದ್ದಾರೆ. ಆರೋಪಿಗಳು ಅಭ್ಯರ್ಥಿಗಳಿಗೆ ನಾವು ಮೌಖಿಕ ಪರೀಕ್ಷೆವರೆಗೂ ಪಾಸ್ ಮಾಡಿಸುತ್ತೇವೆ ಎಂದು ನಂಬಿಸಿದ್ದರು.

ಆದರೆ ಇತ್ತ ಕೆಲಸ ಕೊಡಿಸದೇ, ಕೊಟ್ಟಿರುವ ದುಡ್ಡುನ್ನು ವಾಪಾಸ್ಸು ನೀಡಿದೆ ಅಭ್ಯರ್ಥಿಗಳಿಗೆ ವಂಚಿಸಿದ್ದಾರೆ. ವಂಚನೆಗೊಳಗಾದ ಕೆಲವರು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ಅಧಿಕಾರಿಗಳು ಸಿಸಿಬಿಗೆ ತನಿಖೆ ನಡೆಸುವಂತೆ ಸೂಚಿಸಿತ್ತು.

ಸಿಸಿಬಿ ಪೊಲೀಸರು ಆರೋಪಿಗಳಿಗಾಗಿ ವ್ಯಾಪಕ ಶೋಧ ನಡೆಸಿ, ಖಚಿತ ಮಾಹಿತಿ ಮೇರೆಗೆ ಪೊಲೀಸ್ ಇಲಾಖೆಯ ಜಿಲ್ಲಾ ಸಶಸ್ತ್ರ ಪಡೆಯ ಪೇದೆಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಕೋಟ್ಯಾಂತರ ರೂಪಾಯಿ ಮೌಲ್ಯದ ದಾಖಲಾತಿಗಳು ವಶಪಡಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

CRPF Police ಸಿಸಿಬಿ ಸಶಸ್ತ್ರ ಪಡೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ